ಕೊಪ್ಪಳ ತಾಲೂಕು ತೀವ್ರ ಬರಪೀಡಿತ ಎಂದು ಘೋಷಣೆ ಸಂತಸದ ಸಂಗತಿ : ಶಾಸಕ ರಾಘವೇಂದ್ರ ಹಿಟ್ನಾಳ್

0

Get real time updates directly on you device, subscribe now.

ಕೊಪ್ಪಳ . ಕನ್ನಡನೆಟ್ ನ್ಯೂಸ್

ಮುಂಗಾರು ಮಳೆಯ ಕೊರತೆ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕೊಪ್ಪಳ ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ . ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು

ಕೊಪ್ಪಳ ತಾಲೂಕಿನ ರೈತರು ಎದುರಿಸುತ್ತಿರುವ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದು, ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನಿಸಲಾಗಿತ್ತು.

ರೈತರ ಸಂಕಷ್ಟಕ್ಕೆ ಸ್ಪಂದಿಸಿ ಬರಪೀಡಿತ ತಾಲೂಕು ಎಂದು ಘೋಷಿಸಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಅರ್ಹ ರೈತರಿಗೆ ಅಗತ್ಯವಿರುವ ಬೆಳೆ ಪರಿಹಾರ ಹಾಗೂ ಬರ ಪರಿಹಾರ ಕ್ರಮಗಳು ತ್ವರಿತವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು.

ಇನ್ನು ವಿರೋಧ ಪಕ್ಷದವರು ಏನೇನೋ ಆರೋಪಗಳನ್ನು ಮಾಡುತ್ತಿದ್ದಾಗಲೇ ನಾನು ಸ್ಪಷ್ಟವಾಗಿ ಹೇಳಿದ್ದೆ — “ತಾಳ್ಮೆ ಇರಲಿ, ಕೊಪ್ಪಳ ತಾಲೂಕು ಮೂರನೇ ಪಟ್ಟಿಯಲ್ಲಿ ಬರುತ್ತದೆ” ಎಂದು. ಇಂದು ಅದೇ ಮಾತು ನಿಜವಾಗಿದೆ ಎಂದು ಹೇಳಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!