ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ

0

Get real time updates directly on you device, subscribe now.

 Kannadanet 24×7 News
ಕೊಪ್ಪಳ |: ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕೊಪ್ಪಳ, ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿ, ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಭಾಗ್ಯನಗರ-ಕೊಪ್ಪಳ ಇವರ ಸಹಯೋಗದಲ್ಲಿ 24-09-2026 ರಂದು ಆಯೋಜಿಸಲಾಗಿದ್ದ ಕೊಪ್ಪಳ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕರಾಟೆ ಕ್ರೀಡಾಕೂಟದಲ್ಲಿ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಬಾಲಕಿಯರ ವಸತಿ ಕಾಲೇಜು, ಹಿರೇಸಿಂದೋಗಿ (ಕೊಪ್ಪಳ) ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿನಿಯರ ಸಾಧನೆಯ ವಿವರ
ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು:
ಶಿಫಾ – 44 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ.
ಹೀನಾ ಕೌಸರ್ – 68 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ.
ಮಮತಾಜ್ ಅಳವಂಡಿ + 68 ಕೆ.ಜಿ. ಮೇಲ್ಪಟ್ಟ ವಿಭಾಗದಲ್ಲಿ ಪ್ರಥಮ ಸ್ಥಾನ.
ದ್ವಿತೀಯ ಸ್ಥಾನ ಪಡೆದವರು:
ಅಲ್ಫಿಯಾ ಅಗಳಕೇರಾ – ದ್ವಿತೀಯ ಸ್ಥಾನ.
ಮಾಹೆಮೂಬಿನ್ – ದ್ವಿತೀಯ ಸ್ಥಾನ.
ಅಭಿನಂದನೆಗಳು ಮತ್ತು ಶುಭಾಶಯಗಳು
ವಿದ್ಯಾರ್ಥಿನಿಯರ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ವಿಜಯಕುಮಾರ್ ಗೌಡ , ಕಾಲೇಜಿನ ಸಮಸ್ತ ಸಿಬ್ಬಂದಿ ವರ್ಗದವರು, ತಂಡದ ವ್ಯವಸ್ಥಾಪಕರಾದ ಭಾಗ್ಯಶ್ರೀ ಮೇಡಂ ಹಾಗೂ ಕರಾಟೆ ಕೋಚ್ ಚಾಂದ್ ಪಾಷಾ ಅವರು ಹರ್ಷ ವ್ಯಕ್ತಪಡಿಸಿ, ಸಾಧಕ ವಿದ್ಯಾರ್ಥಿನಿಯರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
ರಾಜ್ಯಮಟ್ಟದ ಕರಾಟೆ ಕ್ರೀಡಾಕೂಟದಲ್ಲಿಯೂ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ, ಕಾಲೇಜಿಗೆ ಹಾಗೂ ಕೊಪ್ಪಳ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!