ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಆಯ್ಕೆ : ಡಾ. ಕೆ.ಎಂ.ಸೈಯದ್ ಅಭಿನಂದನೆ

0

Get real time updates directly on you device, subscribe now.

ಕೊಪ್ಪಳ: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವುದು ಕೊಪ್ಪಳ ಜಿಲ್ಲೆಯ ಜನತೆಗೆ ಹಾಗೂ ಭಕ್ತ ಸಮುದಾಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಮಾಜ ಸೇವಕ ಹಾಗೂ ಕೆಪಿಸಿಸಿ ಸಂಯೋಜಕ, ಮುಖಂಡ ಡಾ. ಕೆ.ಎಂ. ಸೈಯದ್ ಹರ್ಷ ವ್ಯಕ್ತಪಡಿಸಿ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
    ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆ ಅಪಾರವಾಗಿದೆ. ಸಮಾಜದಲ್ಲಿ ಸಮಾನತೆ, ಶಿಕ್ಷಣದ ಮಹತ್ವ, ಮಾನವೀಯ ಮೌಲ್ಯಗಳು ಹಾಗೂ ಸೌಹಾರ್ದತೆಯ ಸಂದೇಶವನ್ನು ಸಾರುವ ಮೂಲಕ ಶ್ರೀಗಳು ಜನಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಯಂತಹ ಪ್ರತಿಷ್ಠಿತ ಅವಕಾಶವು ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಗೆ ದೊರೆತ ಗೌರವವಾಗಿದೆ. ಈ ಆಯ್ಕೆಯಿಂದ ಕೊಪ್ಪಳದ ಕೀರ್ತಿ ರಾಜ್ಯದಾದ್ಯಂತ ಮತ್ತಷ್ಟು ಹೆಚ್ಚಿದೆ ಎಂದು ಡಾ. ಕೆ.ಎಂ. ಸೈಯದ್ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ ಡಾ. ಕೆ.ಎಂ. ಸೈಯದ್ ಅವರು, ಶ್ರೀಗಳ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳು ಮತ್ತಷ್ಟು ಬಲಗೊಳ್ಳಲಿ ಎಂದು ಶುಭ ಹಾರೈಸಿದ್ದಾರೆ.
“ನಾಡಿನ ಪ್ರತಿಷ್ಠಿತ ದಸರಾ ಮಹೋತ್ಸವಕ್ಕೆ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳಂತಹ ಸಮಾಜಮುಖಿ ಸಂತರು ಚಾಲನೆ ನೀಡುತ್ತಿರುವುದು ನಾಡಿನ ಜನತೆಗೆ ಹೆಮ್ಮೆಯ ವಿಚಾರ. ಶ್ರೀಗಳ ಸೇವೆ ಹಾಗೂ ಸಂದೇಶಗಳು ಇನ್ನಷ್ಟು ಜನರಿಗೆ ತಲುಪಲಿ” ಎಂದು ಡಾ. ಕೆ.ಎಂ. ಸೈಯದ್ ಶುಭ ಹಾರೈಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!