ಗಾಂಧೀಜಿಯವರ ಸರಳತೆ, ಸತ್ಯ, ಅಹಿಂಸೆ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಕನ್ನಡನೆಟ್ ನ್ಯೂಸ್ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ನಮಗೆ ತಿಳಿಸಿಕೊಟ್ಟಿರುವ ಸರಳತೆ, ಸೇವೆ, ಸತ್ಯ, ಅಹಿಂಸೆ ಮತ್ತು ದೇಶಭಕ್ತಿಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದರು.

