ಹಿರೇಸಿಂದೋಗಿ 50 ಹಾಸಿಗೆಗಳ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ವೀಕ್ಷಿಸಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ

0

Get real time updates directly on you device, subscribe now.

ಕೊಪ್ಪಳ: ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ 50 ಹಾಸಿಗೆಗಳ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೊಪ್ಪಳ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ವೀಕ್ಷಿಸಿ, ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು.

ನಂತರ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕಾಮಗಾರಿಯನ್ನು ನಿಗದಿತ ಗುಣಮಟ್ಟದೊಂದಿಗೆ ಹಾಗೂ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಮೀಣ ಭಾಗದ ಜನರಿಗೆ ಸ್ಥಳೀಯ ಮಟ್ಟದಲ್ಲಿಯೇ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಈ ಆರೋಗ್ಯ ಕೇಂದ್ರವು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ವಿವಿಧ ಗ್ರಾಮಗಳಿಗೆ ಭೇಟಿ – ಸಾರ್ವಜನಿಕರ ಅಹವಾಲು ಆಲಿಕೆ

ಇದೇ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ ಮತಕ್ಷೇತ್ರದ ದದೇಗಲ್, ಹಲಿಗೇರಿ, ಕೋಳೂರು, ಕಾಟ್ರಳ್ಳಿ, ಹಿರೇಸಿಂದೋಗಿ, ಚಿಕ್ಕಸಿಂದೋಗಿ, ಗುನ್ನಳ್ಳಿ, ವರತಟ್ನಾಳ ಹಾಗೂ ಮಂಗಳಾಪುರ ಗ್ರಾಮಗಳಿಗೆ ಭೇಟಿ ನೀಡಿದರು.

ಗ್ರಾಮಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದ ಶಾಸಕರು, ಸ್ಥಳೀಯ ಅಗತ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಲ್ಲದೇ ಗ್ರಾಮಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಮೂಲಸೌಕರ್ಯ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್ ಬಿ ನಾಗರಳ್ಳಿ, ಮಾಜಿ ಜಿ. ಪಂ ಸದಸ್ಯ ಗವಿಸಿದ್ದಪ್ಪ ಕರಡಿ,ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ , ಎಸ್ ಸಿ ಘಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಾಳೆಪ್ಪ ಪೂಜಾರ್,ಕೇಶವ ರೆಡ್ಡಿ,ವೆಂಕನಗೌಡ್ರು,ನಿಂಗಪ್ಪ ಯತ್ನಟ್ಟಿ, ಹನಮೇಶ ಹೊಸಳ್ಳಿ,ಹನಮಂತ ಹಳ್ಳಿಕೇರಿ, ದೇವಪ್ಪ ವದಗನಾಳ,ಸುರೇಶ ಹಳ್ಳಿಕೇರಿ, ಶರಣಪ್ಪ ಬಿನ್ನಾಳ,ಪ್ರಶಾಂತ್ ಪಾಟೀಲ್, ವಸಂತ ವರತಟ್ನಾಳ, ವಿರೂಪಾಕ್ಷಪ್ಪ ಚಿಕ್ಕಸಿಂದೋಗಿ,ಶಿವಣ್ಣ ಗುನ್ನಳ್ಳಿ, ದೌಲತ್ ಮಂಗಳಾಪುರ,ರಾಮಣ್ಣ ಕೋಳೂರು, ಶಾಂತಪ್ಪ ಕಾಟ್ರಳ್ಳಿ, ಮಾರುತಿ ಕಾಟ್ರಳ್ಳಿ, ಪರಶುರಾಮ್ ಕೆರೆಹಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಫೋಟೋ ಕ್ಯಾಪ್ಶನ್ : ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಿರೇಸಿಂದೋಗಿಯಲ್ಲಿ ನಿರ್ಮಾಣ ಆಗುತ್ತಿರುವ 50 ಹಾಸಿಗೆಗಳ ಸಮುದಾಯ ಅರೋಗ್ಯ ಕೇಂದ್ರ ಕಟ್ಟಡ ನಿರ್ಮಾಣದ ಕಾಮಗಾರಿ ವೀಕ್ಷಿಸುತ್ತಿರುವದು.

Get real time updates directly on you device, subscribe now.

Leave A Reply

Your email address will not be published.

error: Content is protected !!