ಸೇವಾ ಸಂಕಲ್ಪ ಅಭಿಯಾನ 2026 ರ ಸೇವಾ ಜ್ಯೋತಿ ಯಾತ್ರೆ
ಕನ್ನಡನೆಟ್ ನ್ಯೂಸ್
#ಕೊಪ್ಪಳ : ನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ 2026 ರ ಸೇವಾ ಜ್ಯೋತಿ ಯಾತ್ರೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



ಶ್ರೀ ಶಿವಶಾಂತವೀರ ಮಂಗಲ ಭವನದಿಂದ ಆರಂಭವಾದ ಬೈಕ್ ಯಾತ್ರೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿದ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪವು ಕೇವಲ ಒಂದು ಅಭಿಯಾನವಲ್ಲ, ಜನಸೇವೆ, ರಾಷ್ಟ್ರಸೇವೆ ಮತ್ತು ಸಂಘಟನಾ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ನಿರಂತರ ಪ್ರೇರಣೆಯಾಗಿದೆ ಎಂದು ಮುಖಂಡರಾದ ಬಸವರಾಜ ಕ್ಯಾವಟರ್ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಕುಷ್ಟಗಿ ಶಾಸಕ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್ , ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಸೇರಿದಂತೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.
Comments are closed.