ಕನಕಗಿರಿಯಲ್ಲಿ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಕನಕಗಿರಿ: ಕನ್ನಡ ಭಾಷೆ, ಸಾಹಿತ್ಯ
ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕನಕಗಿರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ 13- 10-2026 ಮಂಗಳವಾರ ದಂದು ಸ್ಥಳ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಾಹಿತಿಗಳು, ಕನ್ನಡಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.
ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಾಹಿತ್ಯಾಸಕ್ತರು ಕೈಜೋಡಿಸಬೇಕೆಂದು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮೆಹಬೂಬ್ ಹುಸೇನ್, ಕೋಶ ಅಧ್ಯಕ್ಷರು ರವಿ ಬಲಿಜ, ಕಾರ್ಯದರ್ಶಿಗಳು ಕನಕರೆಡ್ಡಿ, ತಿಪ್ಪಣ್ಣ ಮಡಿವಾಳ್, ಸಂಘದ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಗೆ ತಿಳಿಸಿದರು.
Comments are closed.