ರಾಷ್ಟ್ರೀಯ ಏಕತಾ ದಿನ: ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

Get real time updates directly on you device, subscribe now.

ಕೊಪ್ಪಳ,  : ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಏಕತಾ ಪ್ರತಿಜ್ಞೆ ಸ್ವೀಕರಿಸಲಾಯಿತು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಬೇಕೆಂಬ ಸರ್ಕಾರದ ನಿರ್ದೇಶನದಂತೆ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರರಾದ ಸುಜಾತಾ ಮಾಗಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗಳಾದ ಟಿ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಪಿ.ಬಿ. ಹಿರೇಗೌಡ್ರ, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕರಾದ ಜಯಲಕ್ಷ್ಮಿ ನವಲಿ, ಚುನಾವಣಾ ತಹಶೀಲ್ದಾರರಾದ ರವಿಕುಮಾರ್ ವಸ್ತ್ರದ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!