ಕನ್ನಡಕ್ಕೆ ಪ್ರಥಮ ಆದ್ಯತೆ, ನಾಡ ಪ್ರಗತಿಗೂ ಸರ್ಕಾರ ಬದ್ಧ: ಸಚಿವರಾದ ಶಿವರಾಜ್ ಎಸ್. ತಂಗಡಗಿ
Kannadanet NEWS
: ಕರುನಾಡಿನಲ್ಲಿ ಮಾತೃಭಾಷೆಯಾದ ಕನ್ನಡಕ್ಕೆ ಪ್ರಥಮ ಆದ್ಯತೆ ಎಂಬ ನೀತಿಯನ್ನು ನಮ್ಮ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಇದಕ್ಕೆ ಪೂರಕವಾಗಿ ಎಲ್ಲಾ ಹಂತಗಳಲ್ಲೂ ಕನ್ನಡದ ಅನುಷ್ಠಾನಕ್ಕೆ ಮುಂದಾಗಿದ್ದು, ರಾಜ್ಯದ ಸರ್ವತೋಮುಖ ಪ್ರಗತಿಗೆ ಸರ್ಕಾರವು ಬದ್ಧವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಹೇಳಿದರು.
ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸ
ವದ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ವದ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಕಾರ್ಯಕ್ರಮದಲ್ಲಿ, ಜಿಲ್ಲೆಯ ಜನತೆಗೆ 71ನೇ ಕನ್ನಡ ರಾಜ್ಯೋತ್ಸವದಶುಭಾಶಯ ತಿಳಿಸಿದರ ಸಚಿವರು, ಕರ್ನಾಟಕಕ್ಕೆ ಭವ್ಯ ಇತಿಹಾಸವಿದ್ದು, ಮೌರ್ಯರು, ಕದಂಬರು, ಗಂಗರು, ಹೊಯ್ಸಳರು, ವಿಜಯನಗರದ ಅರಸರು, ಚಾಲುಕ್ಯರು, ರಾಷ್ಟ್ರಕೂಟರು, ಮೈಸೂರಿನ ಒಡೆಯರು ಸೇರಿ ಇನ್ನೂ ಅನೇಕ ರಾಜ-ಮನೆತನಗಳು ಈ ನಾಡಿಗೆ ನೀ
ಡಿದ ಕೊಡುಗೆ ಅಮೋಘವಾಗಿದೆ. ದಾಸಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫರಂಥ ಸಂತಕವಿಗಳು ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವಣ್ಣನವರಂಥಹ ವಚನಕಾರರು, ದಾರ್ಶನಿಕರು ಬಾಳಿ ಬದುಕಿದ ನೆಲ ಇದು ಎಂದರು.
ಡಿದ ಕೊಡುಗೆ ಅಮೋಘವಾಗಿದೆ. ದಾಸಶ್ರೇಷ್ಠ ಕನಕದಾಸರು, ಪುರಂದರದಾಸರು, ಸರ್ವಜ್ಞ, ಶಿಶುನಾಳ ಷರೀಫರಂಥ ಸಂತಕವಿಗಳು ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವಣ್ಣನವರಂಥಹ ವಚನಕಾರರು, ದಾರ್ಶನಿಕರು ಬಾಳಿ ಬದುಕಿದ ನೆಲ ಇದು ಎಂದರು. ಐತಿಹಾಸಿಕ ಜಿಲ್ಲೆಯಾಗಿರುವ ಕೊಪ್ಪಳ ಜಿಲ್ಲೆಯು ಅಪಾರ ವೈವಿಧ್ಯಗಳನ್ನು ಮೇಳೈಸಿಕೊಂಡಿದೆ. ಇಲ್ಲಿನ ವಿವಿಧ ಸಮುದಾಯಗಳ ಸಂಪ್ರದಾಯ, ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಸಮೃದ್ದಿಯಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಪೂರ್ವದಿಂದಲೂ ಕನ್ನಡ ನಾಡಿಗಾಗಿ ಏಕತೆಯ ಹೋರಾಟ ನಡೆದು 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ರಚನೆಯಾಗಿ ಮೈಸೂರು ರಾಜ್ಯವಾಗಿತ್ತು. ತರುವಾಯ ನವೆಂಬರ 01, 1973ರಂದು ನಮ್ಮ ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡಿತು. ಅಂದಿನಿಂದ ಇಂದಿನವರೆಗೆ ಕರ್ನಾಟಕವು ಕನ್ನಡಿಗರ ಭಾವ ಬಂಧನ ಬೆಸೆಯುತ್ತಾ ಬಂದಿದೆ ಎಂದರು.
ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಕೊಪ್ಪಳ ಜಿಲ್ಲೆಯ ಪಾತ್ರವೂ ಅಷ್ಟೇ ಪ್ರಮುಖವಾದುದಾಗಿದೆ. ಕೊಪ್ಪಳ ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ ಅವರು, ಶಿರೂರು ವೀರಭದ್ರಪ್ಪ ತೆಗ್ಗಿನಮನಿ ಅವರು, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ ಅವರು, ಪಂಚಾಕ್ಷರಿ ಹಿರೇಮಠ ಅವರು, ಸೋಮಪ್ಪ ಡಂಬಳ ಅವರು, ದೇವೇಂದ್ರಕುಮಾರ ಹಕಾರಿ ಅವರು, ಭೀಮನಗೌಡ ಪಾಟೀಲ್ ಅವರು, ಹನುಮರಡ್ಡಿ ಕಲ್ಗುಡಿ ಅವರು, ಪಂಚಪ್ಪ ಶೆಟ್ಟರು, ಹಂಜಿ ಕೊಟ್ರಪ್ಪ, ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ನಾವು ಇಂದು ಸ್ಮರಿಸಲೇಬೇಕು ಎಂದು ಹೇಳಿದರು.
ರಾಷ್ಟ್ರಕವಿ ಕುವೆಂಪು ಅವರು ಹೇಳುವಂತೆ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಆದಿಕವಿ ಪಂಪ ಅವರಿಂದ ಆರಂಭವಾಗಿ ರನ್ನ ಮೊದಲಾದ ಕವಿಗಳು ತಮ್ಮ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ ಎಂದು ತಿಳಿಸಿದರು.
2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಕೊಪ್ಪಳದ ಶ್ರೀ ದಾವಲಸಾಬ ಅತ್ತಾರ (ಜಾನಪದ ಕ್ಷೇತ್ರ) ಹಾಗೂ ಶಿವಲಿಂಗಪ್ಪ ತಂದೆ ರಾಮಣ್ಣ (ಜಾನಪದ ಕ್ಷೇತ್ರ) ಇವರ ರಾಜ್ಯದ ಎಲ್ಲ ಮಹನೀಯರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರಕಾರವು ಹೆಚ್ಚಿನ ಒತ್ತು ನೀಡಿದೆ. ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯವಿದೆ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದು ನುಡಿದರು.
ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ. ಈ ನಿಟ್ಟಿನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡುತ್ತಾ ನಾವು ಬರುತ್ತಿದ್ದೇವೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತದೆ ಎಂದರು.
ಶಕ್ತಿ ಯೋಜನೆಯಿಂದ-13.49 ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.
ಯುವನಿಧಿ ಯೋಜನೆಗೆ ಜಿಲ್ಲೆಯಲ್ಲಿ 16,856 ಯುವಕರು ನೋಂದಣಿಯಾಗಿದ್ದು, ಒಟ್ಟು ಇಲ್ಲಿಯವರೆಗೆ 45 ಕೋಟಿ 49 ಲಕ್ಷ 90 ಸಾವಿರ ರೂಪಾಯಿಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗಿದೆ.
ಗೃಹ ಲಕ್ಷ್ಮೀ ಯೋಜನೆಯಡಿ 3 ಲಕ್ಷ 12 ಸಾವಿರ 592 ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.
ಅನ್ನ ಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 2 ಲಕ್ಷ 90 ಸಾವಿರ 459 ಬಿಪಿಎಲ್ ಪಡಿತರ ಚೀಟಿಗಳಿದ್ದು ಒಟ್ಟು 10 ಲಕ್ಷ 83 ಸಾವಿರ 537 ಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಪಡಿತರವನ್ನು ಉಚಿತವಾಗಿ ಪಡೆಯುತಿದ್ದು ಇದಕ್ಕಾಗಿ ಪ್ರತಿ ತಿಂಗಳು 13 ಕೋಟಿ 42 ಲಕ್ಷ 70 ಸಾವಿರದ 417 ರೂ ಗಳನ್ನು ವ್ಯಯಿಸಲಾಗುತ್ತಿದೆ.
ಗೃಹ ಜ್ಯೋತಿ ಯೋಜನೆಯಡಿ ಒಟ್ಟು 2 ಲಕ್ಷದ 89 ಸಾವಿರದ 875 ಗ್ರಾಹಕರ ಪೈಕಿ 2 ಲಕ್ಷದ 83 ಸಾವಿರದ 558 ಫಲಾನುಭವಿಗಳು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
2026-27ನೇ ಸಾಲಿನಲ್ಲಿ ಕಲ್ಯಾಣ ಕರ್ಣಾಟಕ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ 231.26 ಕೋಟಿ ರೂ. ಹಾಗೂ ಮ್ಯಾಕ್ರೋ ವಲಯದಲ್ಲಿ 99.11 ಕೋಟಿ ರೂ. ಹೀಗೆ ಒಟ್ಟು 330.37 ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿರುತ್ತದೆ. ಸದರಿ ಅನುದಾನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮತ್ತು ಸಾಮಾಜಿಕೇತರ ವಲಯದ ಕ್ರಿಯಾಯೋಜನೆ ರೂಪಿಸುವ ಕಾರ್ಯ ಪ್ರಗತಿ ಹಂತದಲ್ಲಿದೆ ಎಂದರು.
2026-27ನೇ ಸಾಲಿನ ಜುಲೈ ತಿಂಗಳಿನಿಂದ ವಿಬಿ-ಜಿ ರಾಮಜಿ ಯೋಜನೆಯು ಪ್ರಾರಂಭವಾಗಿದ್ದು, ಸದರಿ ಸಾಲಿನಲ್ಲಿ ಈಗಾಗಲೇ ಮೊದಲನೇ ಹಂತವಾಗಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕೂಲಿಕಾರರಿಗೆ ಉದ್ಯೋಗವನ್ನು ಒದಗಿಸಲು ರೂ.469.67 ಕೋಟಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ 12,846 ಕಾಮಗಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಬರಗಾಲಕ್ಕೆ ಅನುಗುಣವಾಗಿ ಕೆರೆ ಪುನಃಶ್ಚೇತನ, ಕೃಷಿ ಹೊಂಡ, ವೈಯಕ್ತಿಕ/ಸಮುದಾಯ ಕೊಳವೆ ಬಾವಿ ಮರುಪೂರಣ ಘಟಕ, ಕುರಿ, ಕೋಳಿ, ಹಂದಿ ಶೆಡ್ಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅಕ್ಟೋಬರ್ 23 ರ ಅಂತ್ಯಕ್ಕೆ ಒಟ್ಟು 18.51 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ 2026 ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 90 ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 8,946 ವಿದ್ಯಾರ್ಥಿಗಳು ಪ್ರವೇಶ ಸೌಲಭ್ಯ ಪಡೆದುಕೊಂಡಿರುತ್ತಾರೆ. ಒಟ್ಟು 56 ಸ್ವಂತ ಕಟ್ಟಡಗಳಿದ್ದು, 06 ವಸತಿ ನಿಲಯದ ಸ್ವಂತ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿವೆ. 2025-26ನೇ ಸಾಲಿನಲ್ಲಿ ಶುಲ್ಕ ಮರುಪಾವತಿ ಕಾರ್ಯಕ್ರಮದಲ್ಲಿ 6,953 ವಿದ್ಯಾರ್ಥಿಗಳಿಗೆ ರೂ.718.23 ಲಕ್ಷಗಳನ್ನು ಡಿ.ಬಿ.ಟಿ. ಮೂಲಕ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗಿರುತ್ತದೆ. 2025-26 ನೇ ಸಾಲಿನಲ್ಲಿ ಅಲೆಮಾರಿ, ಅರೆಅಲೆಮಾರಿ ಜನಾಂಗದ 1,227 ವಿದ್ಯಾರ್ಥಿಗಳಿಗೆ ರೂ. 50.74 ಲಕ್ಷ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲಾಗಿದೆ ಎಂದು ತಿಳಿಸಿದರು.
ಕಲೆ ಮತ್ತು ಸಂಸ್ಕೃತಿ ಪ್ರೋತ್ಸಾಹಕ್ಕಾಗಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ, ಚಿಗುರು, ಯುವ ಸೌರಭ ಮತ್ತು ಕಲಾ ಪ್ರತಿಭೋತ್ಸವದಂತಹ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಅದರ ಜೊತೆಗೆ ಕಷ್ಟ ಪರಿಸ್ಥಿತಿಯಲ್ಲಿರುವ ಕಲಾವಿದರ ಆರ್ಥಿಕ ನೆರವಿಗಾಗಿ ಸರ್ಕಾರದಿಂದ ಕೊಪ್ಪಳ ಜಿಲ್ಲೆಯ ಒಟ್ಟು 270 ಕಲಾವಿದರಿಗೆ ಪಿಂಚಣಿ ಮಂಜೂರು ಮಾಡಲಾಗಿದೆ ಎಂದರು.
ಪಶು ಪಾಲನಾ ಇಲಾಖೆಯಡಿ ಜಿಲ್ಲೆಯ 984 ವಲಸೆ ಕುರಿಗಾರರಿಗೆ ಗುರುತಿನ ಚೀಟಿ ನೀಡಲಾಗಿದೆ. 2025-26ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 10+1 ಕುರಿ/ಮೇಕೆ ಘಟಕವನ್ನು ಜಿಲ್ಲೆಯ 27 ಫಲಾನುಭವಿಗಳಿಗೆ ರೂ. 24.30 ಲಕ್ಷ ಅನುದಾನದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಆಂತರಿಕ ಮೇವಿನ ಪ್ರಮಾಣ ಹೆಚ್ಚಿಸಲು ರಾಸುಗಳನ್ನು ಹೊಂದಿರುವ ಮತ್ತು ನೀರಾವರಿ ಸೌಲಭ್ಯ ಹೊಂದಿರುವ ಜಿಲ್ಲೆಯ ರೈತರಿಗೆ 13,324 ಮೇವಿನ ಬೀಜಗಳ ಕಿರು ಪೊಟ್ಟಣಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಿಂದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅಡಿ ಡಿಜಿಟಲ್ ಹೆಲ್ತ್ ಮ್ಯಾರಾಥಾನ್ ಅಡಿ ಆರೋಗ್ಯ ದಾಖಲಾತಿಗಳನ್ನು ಲಿಂಕ್ ಮಾಡುವ ಮೂಲಕ ಮತ್ತು ಸ್ಕ್ಯಾನ್ ಮತ್ತು ಶೇರ್ ಟೋಕನ್ಗಳನ್ನು ರಚಿಸುವ ಮೂಲಕ ಕೊಪ್ಪಳ ಜಿಲ್ಲೆ 05 ಮೆಚ್ಚುಗೆ ಪ್ರಮಾಣ ಪತ್ರವನ್ನು ಪಡೆದಿರುತ್ತದೆ. ಗಂಗಾವತಿ ಉಪವಿಭಾಗ ಆಸ್ಪತ್ರೆಯು ರಾಜ್ಯದಲ್ಲಿಯೇ 16 ವಿಭಾಗಗಳಲ್ಲಿ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಯೋಜನೆಯಡಿಯಲ್ಲಿ ಪ್ರಮಾಣ ಪತ್ರ ಪಡೆದ ಮೊದಲ ತಾಲೂಕಾ ಆಸ್ಪತ್ರೆಯಾಗಿರುತ್ತದೆ ಎಂದರು.
ಇದಲ್ಲದೇ ಕೊಪ್ಪಳ ಜಿಲ್ಲೆಯಲ್ಲಿ 14 ವರ್ಷದಿಂದ 15 ವರ್ಷದೊಳಗಿನ ಒಟ್ಟು 12,188 ಹೆಣ್ಣು ಮಕ್ಕಳಿಗೆ ಹೆಚ್.ಪಿ.ವಿ ಲಸಿಕೆಯನ್ನು ಹಾಕಿಸಲಾಗಿದೆ ಎಂದು ತಿಳಿಸಿದ ಸಚಿವರು ಕೊಪ್ಪಳ ಜಿಲ್ಲೆಯು ಕ್ಷಯರೋಗ ಪತ್ತೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುತ್ತದೆ ಎಂದರು.
ಕೊಪ್ಪಳ ಜಿಲ್ಲೆಯು ಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಡಿ ಅವಶ್ಯಕವಿರುವ ಕ್ಷಯರೋಗಿಗಳಿಗೆ ನಿಕ್ಷಯ ಮಿತ್ರದಡಿಯಲ್ಲಿ ರೂ. 10 ಲಕ್ಷ ಸಂಗ್ರಹಿಸಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ. ರಾಷ್ಟ್ರೀಯ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮಲೇರಿಯಾ ನಿವಾರಣೆಯ “ಶೂನ್ಯ ಮಲೇರಿಯಾ” ಸ್ಥಿತಿಯನ್ನು ಕಾಪಾಡಿಕೊಳ್ಳಲಾಗಿದೆ ಎಂದು ಹೇಳಿದರು.
*ಮಳೆ ಪರಿಸ್ಥಿತಿ ಮತ್ತು ಬಿತ್ತನೆ ಪ್ರಗತಿ:* ಈ ವರ್ಷ ಜಿಲ್ಲೆಯಲ್ಲಿ ವಾಡಿಕೆ ಮಳೆ 570 ಮಿ.ಮೀ. ಇದ್ದು, ವಾಸ್ತವಿಕವಾಗಿ 331 ಮಿ.ಮೀ. ಮಳೆಯಾಗಿದೆ. ಇದರಿಂದ ಶೇ.42ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯ ಒಟ್ಟು ಬಿತ್ತನೆ ಗುರಿ 1.70 ಲಕ್ಷ ಹೆಕ್ಟೇರ್ ಆಗಿದ್ದು, ಇದುವರೆಗೆ 45,635 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು ಶೇ. 27ರಷ್ಟಾಗಿದೆ. ಬಿತ್ತನೆ ಕಾರ್ಯ ಮುಂದುವರಿದಿದ್ದು, ಮಳೆ ಕೊರತೆಯಿಂದ ಮಳೆಯಾಶ್ರಿತ ಪ್ರದೇಶಗಳಲ್ಲಿನ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ ಎಂದರು.
*ಹಿಂಗಾರು ಹಂಗಾಮಿನ ಬಿತ್ತನೆ ಬೀಜ:* ಹಿಂಗಾರು ಹಂಗಾಮಿಗೆ ಅಗತ್ಯವಿರುವ ಜೋಳ, ಕಡಲೆ, ಮೆಕ್ಕೆಜೋಳ, ಶೇಂಗಾ, ಕುಸುಬೆ ಹಾಗೂ ಸೂರ್ಯಕಾಂತಿ ಬೆಳೆಗಳ ಒಟ್ಟು 31,036 ಕ್ವಿಂಟಲ್ ಬಿತ್ತನೆ ಬೀಜವನ್ನು ದಾಸ್ತಾನು ಮಾಡಲಾಗಿದ್ದು, ಇದುವರೆಗೆ 15,096 ಕ್ವಿಂಟಲ್ ಬೀಜವನ್ನು ರೈತರಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆಯಿರುವುದಿಲ್ಲ ಎಂದು ತಿಳಿಸಿದರು.
*ಬೆಳೆ ವಿಮೆ:* 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸುಮಾರು 1.50 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ 1.56 ಲಕ್ಷ ಅರ್ಜಿಗಳು ನೋಂದಣಿಯಾಗಿದ್ದು, ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಮಧ್ಯಂತರ ಪರಿಹಾರವಾಗಿ ಸುಮಾರು 1.53 ಲಕ್ಷ ರೈತರಿಗೆ ಅಂದಾಜು ರೂ. 160 ಕೋಟಿ ಪರಿಹಾರ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.
ಜಿಲ್ಲೆಯ ಜನರು ಈ ನೆಲದ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಎಂದೆಂದಿಗೂ ಆರಾಧಿಸುವರು. ಇಂತಹ ಸಹೃದಯಿ ಬಂಧುಗಳ ಅಪೇಕ್ಷೆಯಂತೆ ಜಿಲ್ಲೆಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಸರ್ಕಾರ ವಿಶೇಷ ಗಮನಹರಿಸಿ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಇಲ್ಲಿನ ಸಂಸ್ಕೃತಿಗೆ ಧಕ್ಕೆಯಾಗದಂತೆ ಕನ್ನಡ ಭಾಷೆಯನ್ನು ಸಧೃಡವಾಗಿ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಹೇಳುತ್ತಾ ತಮ್ಮೆಲ್ಲರಿಗೂ ಮತ್ತೊಮ್ಮೆ “ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು” ಹೇಳಲು ಬಯಸುತ್ತೇನೆ ಎಂದರು.
*ಆಕರ್ಷಕ ಪಥಸಂಚಲನ:* ಕನ್ನಡ ರಾಜ್ಯೋತ್ಸವದ ನಿಮಿತ್ತ ನಡೆದ ಪಥಸಂಚಲನದಲ್ಲಿ ಪೊಲೀಸ್ ಇಲಾಖೆ, ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ & ಗೈಡ್ಸ್ ಸೇರಿ ಒಟ್ಟು 16 ತಂಡಗಳು ಭಾಗವಹಿಸಿ ಆಕರ್ಷಕ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.
*ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನೆನಪಿನ ಕಾಣಿಕೆ ವಿತರಣೆ:* ರಾಜ್ಯೋತ್ಸವದ ನಿಮಿತ್ತ ಕೊಪ್ಪಳದ ಎಸ್.ಎಫ್.ಎಸ್ ಶಾಲೆ ಹಾಗೂ ಕಾಳಿದಾಸ ಪ್ರೌಢಶಾಲಾ ವಿದ್ಯಾರ್ಥಿಗಳು ಅದ್ಭುತವಾಗಿ
ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಚಪ್ಪಳಾ ಗಿಟ್ಟಿಸಿಕೊಂಡರು. ಪಥಸಂಚಲನದಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಕ್ಕಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು.
*ವಿದ್ಯಾರ್ಥಿಗಳಿಗೆ ಗ್ರಾಮಾನುಭವ ಕಾರ್ಯಕ್ರಮಕ್ಕೆ ಚಾಲನೆ:* ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದಲ್ಲಿನ ಜೀವನ, ಸಂಸ್ಕೃತಿ, ಕೃಷಿ ಮತ್ತು ಇತರ ವಿಷಯಗಳ ಕುರಿತು ಕ್ಷೇತ್ರ ಅಧ್ಯಯನ ಮೂಲಕ ಪರಿಚಯಿಸುವ “ವಿದ್ಯಾರ್ಥಿಗಳ ಗ್ರಾಮಾನುಭವ ಕಾರ್ಯಕ್ರಮ”ಕ್ಕೆ ಸಚಿವರು ಚಾಲನೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಿರ್ಮಲಾ, ಸಹಾಯಕ ಆಯುಕ್ತರಾದ ಮಹೇಬೂಬ್ ಜೀಲಾನ್ ಖುರೇಶಿ, ಕೊಪ್ಪಳ ತಹಶಿಲ್ದಾರರಾದ ಬಸವರಾಜ ತನ್ನಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ, ಎನ್.ಸಿ.ಸಿ, ಭಾರತ ಸ್ಕೌಟ್ಸ್ & ಗೈಡ್ಸ್, ಭಾರತ ಸೇವಾದಳ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
*ಮೆರವಣಿಗೆ:* 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಬೆಳಿಗ್ಗೆ ಕೊಪ್ಪಳ ತಹಶೀಲ್ದಾರ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಂಡ ನಾಡ ದೇವತೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಗೆ ಜಿ.ಪಂ ಸಿಇಓ ಹಾಗೂ ಅಪರ ಜಿಲ್ಲಾಧಿಕಾರಿಗಳು ಜಂಟಿಯಾಗಿ ಚಾಲನೆ ನೀಡಿದರು. ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದೇ ವೇಳೆ ಉಪಸ್ಥಿತರಿದ್ದರು.
ವಿವಿಧ ಜಾನಪದ ಕಲಾತಂಡಗಳು ತಮ್ಮ ಆಕರ್ಷಕ ಕಲಾ ಪ್ರದರ್ಶನದ ಮೂಲಕ ಮೆರವಣಿಗೆಯ ಮೆರುಗನ್ನು ಹೆಚ್ಚಿಸಿದವು.
Comments are closed.