ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಗೆಲುವಿಗೆ ಹೆಚ್ ಡಿ ಕೆ ನಿರ್ದೇಶನ

Get real time updates directly on you device, subscribe now.


ಕೊಪ್ಪಳ: ಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎನ್ ಡಿ ಎ ಒಕ್ಕೂಟ ಜಿಲ್ಲೆಯಲ್ಲಿ ಅಧಿಕಾರಕ್ಕೆ ಬರುವಂತೆ ಕಾರ್ಯತಂತ್ರ ರೂಪಿಸಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದ್ದಾರೆ.

ಮಂಗಳವಾರ ಸಚಿವರ ಬೆಂಗಳೂರಿನ ಜೆ ಪಿ ನಗರದ ನಿವಾಸದಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಚಂದ್ರಶೇಖರ
ಪಕ್ಷದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹೈಕಮಾಂಡ್ ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ಮೈತ್ರಿ ಇರಬೇಕೆಂದು ನಿರ್ಧರಿಸಿದೆ. ಮೈತ್ರಿ ಬಲಶಾಲಿಯಾಗಿದ್ದರಿಂದ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದೇ ರೀತಿ ಒಗ್ಗಟ್ಟಿನಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕೊಪ್ಪಳದಲ್ಲಿ ಎನ್ ಡಿ ಎ ಒಕ್ಕೂಟ ಗೆಲ್ಲಲು ಉತ್ತಮ ಅವಕಾಶವಿದೆ. ಎರಡೂ ಪಕ್ಷಗಳ ಮುಖಂಡರಲ್ಲಿ ಹೊಂದಾಣಿಕೆ ಇದೆ. ಇದರ ಉಪಯೋಗ ಪಡೆದುಕೊಂಡು ಕಾರ್ಯತಂತ್ರ ರೂಪಿಸಲು ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲಿಯೇ ಸಚಿವರು ಕೊಪ್ಪಳಕ್ಕೆ ಭೇಟಿ ನೀಡುವ ಭರವಸೆ ಕೊಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಎರಡು ವರ್ಷಗಳ ಕೆಳಗೆ ನೀಡಿದ ನಿರ್ದೇಶನಗಳನ್ನು ಕೊಪ್ಪಳ ಜಿಲ್ಲೆಯ ಕೈಗಾರಿಕೆಗಳು ಉಲ್ಲಂಘಿಸಿದ್ದು ಕಂಡು ಬಂದರೆ

ಸೂಕ್ತ ಕ್ರಮಕ್ಕಾಗಿ ರಾಜ್ಯ ಪರಿಸರ ಇಲಾಖೆಗೆ ನಿರ್ದೇಶನ ನೀಡಲಾಗುವುದು. ಸ್ಥಳೀಯರ ಆಶೋತ್ತರಕ್ಕೆ ವಿರುದ್ಧವಾಗಿ ಕಾರ್ಖಾನೆಗಳು
ವಿಸ್ತರಣೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಕೊಪ್ಪಳ ಬಂದ್ ಕಾರ್ಯಕ್ರಮದಲ್ಲಿ ಗವಿಶ್ರೀ ಅವರನ್ನು ಗುರಿಯಾಗಿಸಿಕೊಂಡಿರುವುದು ಅಕ್ಷಮ್ಯ. ಸಮಸ್ಯೆ
ಬಗೆಹರಿಸುವ ಮೂಲಭೂತ ಜವಾಬ್ದಾರಿ ಸ್ಥಳೀಯ ಜನ ಪ್ರತಿನಿಧಿಗಳದ್ದು. ಅವರು ನಿಷ್ಕ್ರಿಯರಾದರೆ ಸಮಸ್ಯೆ ಬಗೆಹರಿಯುವುದು ಅಸಾಧ್ಯ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!