ನವೆಂಬರ್ 16ರಂದು ದಿಶಾ ಸಮಿತಿ ಸಭೆ

0

Get real time updates directly on you device, subscribe now.

ಕೊಪ್ಪಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ 2026-27ನೇ ಸಾಲಿನ ಮೊದಲ ಮತ್ತು ಎರಡನೇ ತ್ರೈಮಾಸಿಕದ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ನವೆಂಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರು ಹಾಗೂ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ವಹಿಸುವರು. ದಿಶಾ ಸಮಿತಿಯ ಸದಸ್ಯರುಗಳು ಸಭೆಗೆ ಹಾಜರಾಗಲು ಕೋರಿದೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿನಿಧಿಗಳನ್ನು ನಿಯೋಜಿಸದೆ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ವರ್ಣಿತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!