ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವ ಸತೀಶ ಜಾರಕಿಹೊಳಿ

0

Get real time updates directly on you device, subscribe now.


ಕೊಪ್ಪಳ : ಲೋಕೋಪಯೋಗಿ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ವಿವಿಧೆಡೆ ಚಾಲ್ತಿಯಲ್ಲಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 13ರಂದು, ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಟಿ ರಘುಮೂರ್ತಿ ಹಾಗೂ ಸಂಸದರಾದ ಕೆ ರಾಜಶೇಖರ ಹಿಟ್ನಾಳ ಮತ್ತು ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರೊಂದಿಗೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಕೊಪ್ಪಳ ನಗರದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯು ಚಾಲ್ತಿಯಲ್ಲಿದೆ. ಯಲಬುರ್ಗಾ ತಾಲೂಕಿನ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಯಾಗಿದೆ.
ಜಿಲ್ಲೆಯಲ್ಲಿ ಬಿಸಿಎಂ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ ಮಂಜೂರಾದ ಮೂರು ಕಾಮಗಾರಿಗಳು ಪ್ರಗತಿಯಲ್ಲಿವೆ. ಕೊಪ್ಪಳ ತಾಲೂಕಿನಲ್ಲಿ ಮೂರು ದೇವಸ್ಥಾನದ ಕೆಲಸಗಳು ಸಹ ಪ್ರಗತಿಯಲ್ಲಿವೆ.
ಯಲಬುರ್ಗಾದಲ್ಲಿ ಹೊಸ
ತಾಲೂಕು ಸೌಧ ನಿರ್ಮಾಣದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಕುಷ್ಟಗಿಯಿಂದ ವಾಯಾ ತಾವರಗೇರಾದ ಮೂಲಕ ಲಿಂಗಸೂರು ಸಂಪರ್ಕಿಸುವ ಹಾಗೂ ಕುಷ್ಟಗಿಯಿಂದ ವಾಯಾ ಗಜೇಂದ್ರಗಡ ಮೂಲಕ ರೋಣ ತಾಲೂಕು ಸಂಪರ್ಕಿಸುವ ರಸ್ತೆಗಳ ದುರಸ್ಥಿ ಪ್ರಕ್ರಿಯೆ ಸೇರಿದಂತೆ ನಾನಾ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು.
ಗಂಗಾವತಿಯಿಂದ ಕನಕಗಿರಿ,
ಯಲಬುರ್ಗಾದಿಂದ ಕನಕಗಿರಿ,
ಕಾರಟಗಿಯಿಂದ ಕನಕಗಿರಿ ಸೇರಿದಂತೆ ಬೇರೆ ಬೇರೆ ಕಡೆಗಿನ ತಾಲೂಕು ಸಂಪರ್ಕ ರಸ್ತೆಗಳ ದುರಸ್ತಿಯ ಬಗ್ಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಚಿವರಿಂದ ಸಲಹೆ: ಕೆಕೆಆರ್ ಡಿಬಿ, ಲೋಕೋಪಯೋಗಿ ಸೇರಿದಂತೆ ಬೇರೆ ಬೇರೆ ಅನುದಾನದಿಂದ ಕನಕಗಿರಿ, ಕಾರಟಗಿ, ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಕುಕನೂರು ಮತ್ತು ಕೊಪ್ಪಳ ತಾಲೂಕಿನಲ್ಲಿ ಅವಶ್ಯವಿರುವ ಕಡೆಗಳಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರ ಬೇಡಿಕೆಯಂತೆ ಕನಕಗಿರಿಯಿಂದ ಮುಸಲಾಪುರ ಸಂಪರ್ಕ ರಸ್ತೆ ಸೇರಿದಂತೆ ಇನ್ನೀತರ ಕಡೆಗೆ ಕೂಡಲೇ ರಸ್ತೆ ದುರಸ್ತಿ ಕಾರ್ಯದ ಪ್ರಸ್ತಾವನೆಯನ್ನು ಲೋಕೋಪಯೋಗಿ ಇಲಾಖೆಯಲ್ಲಿ ತೆಗೆದುಕೊಳ್ಳಲು ಸಚಿವರಾದ ಶಿವರಾಜ ತಂಗಡಗಿ ಅವರು ಸಲಹೆ ಮಾಡಿದರು.
ಸಂಸದರು ಹಾಗೂ ಶಾಸಕರಿಂದ ಮನವಿ: ಹೆಚ್ಚಿನ ಭಾರ ಹೊತ್ತ ಲಾರಿಗಳು ಕಾರ್ಖಾನೆಗಳಿಗೆ ನಿರಂತರ ಅಡ್ಡಾಡುತ್ತಿರುವುದರಿಂದ ಕೊಪ್ಪಳ ತಾಲೂಕು ವ್ಯಾಪ್ತಿಯ ಕಾಸನಖಂಡಿ ಸೇರಿದಂತೆ ಸುತ್ತಲಿನ ವಿವಿಧೆಡೆ ಹಾಳಾಗಿರುವ ಗ್ರಾಮ ಸಂಪರ್ಕ ರಸ್ತೆಗಳ ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆಯಿಂದ ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಸಂಸದರಾದ ಕೆ ರಾಜಶೇಖರ ಹಿಟ್ನಾಳ ಹಾಗೂ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ಅವರು ಸಚಿವರಲ್ಲಿ ಮನವಿ ಮಾಡಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!