ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

0

Get real time updates directly on you device, subscribe now.

ಕೊಪ್ಪಳ ನ. ೧೪: ಕೊಪ್ಪಳ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಹಿಳೆಯರ ಖೋಖೋ ಪಂದ್ಯಾಟಗಳನ್ನು ತಳಬಾಳಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪದ್ಯಾಟದಲ್ಲಿ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ. ಭಾಗವಹಿಸಿದ ತಂಡದ ವಿದ್ಯಾರ್ಥಿನಿಯರಿಗೆ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟಿನ ಕಾರ್ಯದರ್ಶಿಗಳಾದ ಡಾ.
ಆರ್.ಮರೇಗೌಡ, ಕಾಲೇಜಿನ ಪ್ರಾಚಾರ್ಯರಾದ ಡಾ. ಚನ್ನಬಸವ, ದೈಹಿಕ ಶಿಕ್ಷಣ ನಿರ್ದೇಶಕರಾದ ವಿನೋದ ಸಿ. ಮುದಿಬಸನಗೌಡರ ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!