ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ

Get real time updates directly on you device, subscribe now.

ಬೆಂಗಳೂರು, ಜೂನ್ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡುವರು.ಅಂದು ಮಧ್ಯಾಹ್ನ 1 ಗಂಟೆಯ ಬಳಿಕ ಈ ಸೌಲಭ್ಯವನ್ನು ಮಹಿಳೆಯರು ಪಡೆಯಬಹುದಾಗಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.ಈ ಸಂದರ್ಭದಲ್ಲಿ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿಗಳು ಅನಾವರಣ ಗೊಳಿಸಲಿದ್ದಾರೆ.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!