ಕೊಪ್ಪಳ ಅ. 7ಕ್ಕೆ“ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ” ಜನಾಗ್ರಹ ಚಳುವಳಿಗೆ ನಿರ್ಧಾರ

Get real time updates directly on you device, subscribe now.

Kannadanet.com

. ನಗರದಲ್ಲಿ ಅ. 7ಕ್ಕೆ“ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಿ” ಜನಾಗ್ರಹ ಚಳುವಳಿಗೆ ಬೆಂಬಲಿಸಲು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ನಗರ ಘಟಕ. ಬಡಾವಣೆ ಘಟಕಗಳ. ಗ್ರಾಮಗಳ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಮಾತನಾಡಿ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಹೊರತು ಕೊಟ್ಟ ಭರವಸೆಗಳಲ್ಲಿ ಕೆಲವು ಪ್ರಮುಖ ಭರವಸೆಗಳನ್ನು ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 07 ಅಕ್ಟೋಬರ್ 2023ರಂದು ಶನಿವಾರ ರಾಜ್ಯಾದ್ಯಂತ ಜನಾಗ್ರಹ ಚಳುವಳಿಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ಹಮ್ಮಿಕೊಳ್ಳುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮುಂದೆ ಸಾಮೂಹಿಕ ಸಂಘಟನೆಗಳ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಬಡಾವಣೆಗಳ ಘಟಕಗಳ. ಗ್ರಾಮಗಳ ಘಟಕಗಳ ಪದಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಕಟ್ಟಡ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬರಲು ಪ್ರತಿಯೊಬ್ಬರು ಪ್ರೇರೇಪಿಸಬೇಕು ಎಂದು ಹೇಳಿದರು.
ಭಾಗ್ಯನಗರದ ಮರಿಯಮ್ಮ ದೇವಿ ಕಟ್ಟಡ ಮತ್ತು ಇತರೆ ಕಾರ್ಮಿಕರ ಕಾರ್ಮಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮೌಲಾ ಹುಸೇನ್ ಮಾತನಾಡಿ

 

ಕಟ್ಟಡ ಕಾರ್ಮಿಕರ ಮುಖಂಡ ತುಕಾರಾಂ ಪಾತ್ರೋಟಿ ಮಾತನಾಡಿ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಉಚಿತ ಬಸ್ ಗಳಲ್ಲಿ ನಿರ್ವಾಹಕರಿಂದ ಪ್ರಯಾಣಿಸುವ ಮಹಿಳೆಯರಿಗೆ ಗೌರವ ಸ್ಥಾನಮಾನ ನೀಡದೆ ಅಗೌರವದಿಂದ ನಡೆದುಕೊಳ್ಳುವುದನ್ನು ನಿಲ್ಲಿಸಿ ತಮ್ಮ ತಂಗಿಯ ಅಕ್ಕ ತಾಯಿಯಂತೆ ನಡೆದುಕೊಳ್ಳಬೇಕು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವ ಲ್ಯಾಪ್ ಟಾಪ್ ಗಳನ್ನು ನಿಜವಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಗುವ ಸಾಧ್ಯತೆಗಳಿಲ್ಲ. ಸಂಘಟನೆಗಳು ಹೆಚ್ಚಿನ ಗಮನ ಕೊಟ್ಟು ನಿಜವಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ಗಳನ್ನು ಸಿಗುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

 

Get real time updates directly on you device, subscribe now.

Comments are closed.

error: Content is protected !!
%d bloggers like this: