ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆಯ

Get real time updates directly on you device, subscribe now.

*

—-

ಕೊಪ್ಪಳ ): ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಆಡಳಿತ ಭವನದಲ್ಲಿನ ಜಿ.ಎಚ್.ಪಾಟೀಲ ಸಭಾಂಗಣದಲ್ಲಿ ಜೂನ್ 7ರಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ಕೆಲವು ಕಡೆಗಳಲ್ಲಿ ವಾಂತಿ ಬೇಧಿ ಪ್ರಕರಣಗಳು ಕಂಡು ಬಂದಿರುವುದರಿಂದ ಮುಂಜಾಗ್ರತೆ ವಹಿಸಬೇಕು. ಜಿಲ್ಲೆಯ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಟ್ಯಾಂಕ್, ಸಂಪು ಮತ್ತು ಇತರೆ ಕುಡಿಯುವ ನೀರನ್ನು ಸರಬರಾಜು ಮಾಡುವ ಎಲ್ಲಾ ಕುಡಿಯುವ ನೀರಿನ ಮೂಲಗಳ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ಖಾತರಿಪಡಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮುಂಜಾಗ್ರತಾ ವಹಿಸಲು ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳಿಗೆ ಹಾಗು ವೃದ್ದರಿಗೆ ಸಾಂಕ್ರಾಮಿಕ ರೋಗಗಳು ಹರಡಿರುವುದು ಕಂಡುಬಂದಲ್ಲಿ ಅಂತಹ ರೋಗಿಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಲು ಸೂಚಿಸಲಾಗಿದೆ. ಒಂದು ವೇಳೆ ರೋಗಿಯು ಚಿಕಿತ್ಸೆಗೆ ಸ್ಪಂದಿಸದೇ ಇದ್ದಲ್ಲಿ ತಕ್ಷಣವೇ ಅಂಬ್ಯುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ರವಾನಿಸಲು ಅಗತ್ಯ ಕ್ರಮವಹಿಸಲು ತಿಳಿಸಲಾಗಿದೆ.

ಸಾರ್ವಜನಿಕರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛ ಮತ್ತು ಶುದ್ದ ಕುಡಿಯುವ ನೀರನ್ನು ಪೂರೈಸುವಲ್ಲಿ ಕಾರ್ಯಪ್ರವೃತ್ತರಾಗಲು ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ತಕ್ಷಣವೇ ಮುಂಜಾಗೃತ ಕ್ರಮವಹಿಸಲು ಮತ್ತು ಒಂದು ವೇಳೆ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸದರಿ ಸ್ಥಳಗಳಿಗೆ ಸ್ಥಾನಿಕವಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಲು ನಿಯಮಾನುಸಾರ ಅಗತ್ಯ ಕ್ರಮತೆಗೆದುಕೊಳ್ಳಲು ತಿಳಿಸಲಾಗಿದೆ.

ಜಿಲ್ಲೆಯ ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ಸಂಬಂಧಿಸಿದ ತಾಲೂಕುಗಳ ತಹಸೀಲ್ದಾರರು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಈ ಕೂಡಲೇ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವ ಮೂಲಗಳಾದ ಓಎಚ್‌ಟಿ, ಎಂವಿಎಸ್ ಮತ್ತು ಸಂಪು ಇತ್ಯಾದಿಗಳ ನೀರಿನ ಪರೀಕ್ಷೆ ಕೈಗೊಂಡು, ಒಂದು ವೇಳೆ ಸದರಿ ನೀರು ಕುಡಿಯಲು ಅಸುರಕ್ಷಿತ ಎಂದು ಕಂಡುಬಂದಲ್ಲಿ ಆ ನೀರನ್ನು ಕುಡಿಯಲು ಉಪಯೋಗಿಸದಂತೆ ನಿರ್ಭಂದಿಸಿ ಅಂತಹ ಜನವಸತಿ ಪ್ರದೇಶಗಳಿಗೆ ಟ್ಯಾಂಕರ್, ಶುದ್ದ ಕುಡಿಯುವ ನೀರಿನ ಘಟಕಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡುವ ಮೂಲಗಳಾದ ಓಎಚ್‌ಟಿ, ಎಂವಿಎಸ್, ಸಂಪು ಇತ್ಯಾದಿಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ ಕ್ಲೋರಿನೇಷನ್ ಮಾಡಿಸಲು ಮತ್ತು ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮವಾಗಿ ಡಂಗೂರು ಹಾಕಿಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ತಿಳಿಸಲಾಗಿದೆ.

ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಮಾರು 50 ಕೆಜಿ ಪ್ರಮಾಣದ ಬ್ಲೀಚಿಂಗ್ ಪೌಡರ್ ಕಾಯ್ದಿರಿಸಿಟ್ಟುಕೊಳ್ಳಲು ಸೂಚಿಸಲಾಗಿದೆ. ತಗ್ಗು ಪ್ರದೇಶದಲ್ಲಿ ಹಾಕಲಾಗಿರುವ ಕುಡಿಯುವ ನೀರಿನ ನಲ್ಲಿಗಳನ್ನು ಎತ್ತರ ಮಟ್ಟದಲ್ಲಿ ಹಾಕಲು ಹಾಗೂ ನಲ್ಲಿಯ ಅಕ್ಕ ಪಕ್ಕದಲ್ಲಿ ಸ್ವಚ್ಚತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಲು ಜನರಿಗೆ ತಿಳಿಸಲು ಹೇಳಲಾಗಿದೆ.

ತುರ್ತು ಸಂದರ್ಭಗಳಲ್ಲಿ ಅಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುವ ಕುರಿತು ವಾಹನಗಳನ್ನು ಸುರಕ್ಷತೆಯಿಂದ ಇಟ್ಟುಕೊಳ್ಳಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಕೆ. ಮಳಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ ಇದ್ದರು.

Get real time updates directly on you device, subscribe now.

Comments are closed.

error: Content is protected !!