ಸುಸ್ಥಿರವಾಗಿ ಮುಟ್ಟಿನ ನಿರ್ವಹಣೆ ಅನುಷ್ಠಾನ: ತರಬೇತಿ
ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ ರಾಜ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತಿರುವ 18 ರಿಂದ 50 ವಯೋಮಾನದ ಮಹಿಳೆಯರಿಗೆ ಮೆನ್ ಸ್ಠೋಲ್ ಹೈಜಿನ್ ಅರಿವು ಮೂಡಿಸಿ ಸುಸ್ಥಿರವಾಗಿ ಮುಟ್ಟಿನ ನಿರ್ವಹಣೆ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಒಂದು ದಿನದ ತರಬೇತುದಾರರ ತರಬೇತಿ ಕಾರ್ಯಕ್ರಮ ಅಕ್ಟೋಬರ್ 10ರಂದು ಜಿಪಂ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಪಿ ಸಿರಸಗಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ ಪ್ರಕಾಶ ಜಿ., ಸಂಪನ್ಮೂಲ ವ್ಯಕ್ತಿಗಳಾದ ಡಾ ಮೀನಾಕ್ಷಿ ಭರತ, ಡಾ ಶೋಭಾ ರಾಣಿ, ರೇಖಾ ಹಾಗೂ ದಿಲಿಪ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಂಜೀವಿನಿ ಎಮ್.ಬಿಕೆ ಎಲ್.ಸಿ.ಆರ್.ಪಿ.ಗಳು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಮತ್ತು ಮಕ್ಕಳ ಇಲಾಖೆಯ ವಲಯ ಮೇಲ್ವಿಚಾರಕರು ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳಾದ ಗಂಗಪ್ಪ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ಪ್ರೀತಿ ಕೋರೆ ಪ್ರಾರ್ಥನೆ ಗೀತೆ ಹಾಡಿದರು. ಜಿಪಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಕಟಗಿ ಅಂಬಣ್ಣ ನಿರೂಪಣೆ ಮಾಡಿದರು. ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೋಟಗಾರ ಅವರು ವಂದನಾರ್ಪಣೆ ಮಾಡಿದರು.
ತರಬೇತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 42, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ 43, ಪಂಚಾಯತ್ ರಾಜ್ ಇಲಾಖೆಯ 36, ಶಿಕ್ಷಣ ಇಲಾಖೆಯ 01, ಅಲ್ಪ ಸಂಖ್ಯಾತರ ಇಲಾಖೆಯ 21, ಸಂಜೀವಿನಿ ಯೋಜನೆಯ ಸಿಬ್ಬಂದಿಗಳು ಹಾಗೂ ಮುಖ್ಯ ಪುಸ್ತಕ ಬರಹಗಾರರು 10 ಜನರು ಹಾಜರಿದ್ದರು.
Comments are closed.