ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ

Get real time updates directly on you device, subscribe now.

: ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ನಿಯಮಗಳು, 1995ರ ನಿಯಮ ರಿತ್ಯ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 11ರಂದು ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊಪ್ಪಳ ಕೇಂದ್ರ ಸ್ಥಾನ ಮತ್ತು ಗಂಗಾವತಿ ನಗರದಲ್ಲಿ ಡಾ.ಬಾಬು ಜಗಜೀವನರಾಮ್ ಭವನ ಮತ್ತು ಡಾ.ಬಿ.ಆರ್.ಅಂಬೇಡ್ಕರ ಭವನಗಳ ನಿರ್ಮಾಣದ ಬಗ್ಗೆ ಚರ್ಚೆ ನಡೆಯಿತು. ಕೊಪ್ಪಳದಲ್ಲಿ ಡಾ.ಬಾಬು ಜಗಜೀವನರಾಮ್ ಭವನಕ್ಕೆ ಸಂಬAಧಿಸಿದAತೆ ಹೆಚ್ಚುವರಿ ಕಾಮಗಾರಿಯ ಅಂದಾಜು ಪತ್ರಿಕೆಯನ್ನು ಕೇಂದ್ರ ಕಚೇರಿಗೆ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಕಚೇರಿಯನ್ನು ಆರಂಭಿಸಲು ಅನುಮತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಗಂಗಾವತಿಯಲ್ಲಿ ನಿವೇಶನ ಹಸ್ತಾಂತರ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ದೌರ್ಜನ್ಯದಲ್ಲಿ ನೊಂದ ಸಂತ್ರಸ್ಥರಿಗೆ ಪರಿಹಾರ ಧನ ಮಂಜೂರಾತಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. 2023ನೇ ಸಾಲಿನಲ್ಲಿ ಒಟ್ಟು 29 ಪ್ರಕರಣಗಳಲ್ಲಿ 2022-23ನೇ ಸಾಲಿನ 14 ಪ್ರಕರಣಗಳನ್ನು ಹೊರತುಪಡಿಸಿ 29 ಪ್ರಕರಣಗಳಿಗೆ 58.75 ಲಕ್ಷ ರೂ. ಪರಿಹಾರ ಮಂಜೂರಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ತಾವರಗೇರಾ ಗ್ರಾಮದಲ್ಲಿನ ಸ್ಮಶಾನ ಭೂಮಿ ಬಗ್ಗೆ ಚರ್ಚೆ ನಡೆಯಿತು. ಕುಷ್ಟಗಿ ತಾಲೂಕು ತಾವರಗೇರಾ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸ್ಮಶಾನ ಭೂಮಿ ಒದಗಿಸಲು ಖಾಸಗಿ ಜಮೀನಿನ ಮಾಲೀಕರು ಒಪ್ಪಿದ್ದಾರೆ. ಅದರಂತೆ ಇನ್ನೊಂದು ಎಕರೆ ಜಮೀನನ್ನು ಖರೀದಿಸಲು ಅನುಮತಿ ಮತ್ತು ಅನುದಾನ ಬಿಡುಗಡೆಗಾಗಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಕೋರಲಾಗಿದೆ ಎಂದು ಅಧಿಕಾರಿಗಳು ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೇವೂರ ಗ್ರಾಮದ ಪರಿಶಿಷ್ಟ ಕಾಲೋನಿಯಲ್ಲಿರುವ ಅಂಗನವಾಡಿ ಸಮಸ್ಯೆಯನ್ನು ಬೇಗನೆ ಸರಿಪಡಿಸಬೇಕು ಎಂದು ಸದಸ್ಯರು ಕೋರಿದರು. ಇಲ್ಲಿಗೆ ಅಂಗನವಾಡಿ ಕಾರ್ಯಕರ್ತೆಯನ್ನು ಕೂಡಲೇ ನೇಮಿಸಲು ಕ್ರಮ ವಹಿಸಬೇಕು. ಅಲ್ಲಿವರಗೆ ಬೇರೆಯವರಿಗೆ ನಿಯೋಜನೆ ಮಾಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ಈ ಬೇವೂರ ಗ್ರಾಮದ ಪರಿಶಿಷ್ಟ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಹೆಚ್ಚುವರಿ ಕೊಠಡಿಯನ್ನು ನಿರ್ಮಿಸಲು ಗ್ರಾಮ ಪಂಚಾಯಿತಿಯಿAದ ಅನುದಾನ ಪಡೆದು ಕಟ್ಟಡ ನಿರ್ಮಿಸಲು ಕ್ರಮ ವಹಿಸುವಂತೆ ಕುಷ್ಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಕುಷ್ಟಗಿ ತಾಲೂಕು ಪಂಚಾಯತ್‌ನಲ್ಲಿ ಗ್ರಾಮ ಪಂಚಾಯತ್ ನಿಧಿ ಶೇ.24.10 ಅನುದಾನದ ಕುರಿತು ಚರ್ಚೆ ನಡೆಯಿತು. 15ನೇ ಹಣಕಾಸು ಅಡಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿ ಕಾಮಗಾರಿಗಳನ್ನು ಕ್ರಿಯಾಯೋಜನೆಯಲ್ಲಿ ಅಳವಡಿಸಿ ಕಾಮಗಾರಿ ನಿರ್ವಹಿಸಲಾಗುತ್ತದೆ. ಗ್ರಾಮ ಪಂಚಾಯತ್ ಕರವಸೂಲಿ ನಿಧಿಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಅವಶ್ಯವಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ನೈರ್ಮಲ್ಯೀಕರಣ, ಕುಡಿಯುವ ನೀರು, ಬೀದಿ ದೀಪ ನಿರ್ವಹಣೆ ಹಾಗೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಕ್ಕಾಗಿ ಹಣವನ್ನು ವಿನಿಯೋಗಿಸಲು ಕ್ರಮ ವಹಿಸಲಾಗುತ್ತದೆ ಎಂದು ಕುಷ್ಟಗಿ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಸಭೆಗೆ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯವರು ಸ್ವಯಂ ಉದ್ಯೋಗ ಮತ್ತು ಸಹಾಯಧನಕ್ಕೆ ಬ್ಯಾಂಕಗಳಿAದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಸರಿಯಾದ ಸಮಯಕ್ಕೆ ಸಾಲ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದು ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಈ ಬಗ್ಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರಿಂದ ವರದಿ ಪಡೆಯಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲು ಬಿಎಲ್‌ಬಿಸಿ ಸಭೆಯಲ್ಲಿ ಆಯಾ ಶಾಖಾ ವ್ಯವಸ್ಥಾಪಕರಿಗೆ ಸೂಚಿಸಿದ್ದಾಗಿ ಲೀಡ್ ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ ಎಂದು ಸಭೆಗೆ ವಿವರಿಸಿದರು.
ಕೃಷಿ ಜಮೀನಿಗೆ ಬೇಡಿಕೆ: ಎಸ್ಸಿ ಮತ್ತು ಎಸ್ಟಿ ಸಮುದಾಯದ ಜನರಿಗೆ ಕೃಷಿ ಜಮೀನು ಒದಗಿಸಬೇಕು ಎನ್ನುವ ಮನವಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ಬಗ್ಗೆ ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಜಂಟಿ ಸಮೀಕ್ಷೆ ನಡೆಸಿ ಗ್ರಾಮ ಸರ್ವೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಅಂಗನವಾಡಿ ಸ್ಥಿತಿಗತಿ ವರದಿ: ಎಸ್ಸಿ ಮತ್ತು ಎಸ್ಟಿ ವರ್ಗದವರು ವಾಸಿಸುವ ಪ್ರದೇಶದಲ್ಲಿನ ಅಂಗನವಾಡಿಗಳ ಸ್ಥಿತಿಗತಿಯ ಬಗ್ಗೆ ಸಮಗ್ರ ವರದಿ ಕೊಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಏನಾದರು ಸಮಸ್ಯೆಯಿದ್ದಲ್ಲಿ ಅದನ್ನು ಕೂಡಲೇ ಸರಿಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು, ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ದ್ಯಾಮಣ್ಣ ಗೊಂದಿ, ಚಂದಾಲಿAಗಪ್ಪ, ಎಸ್.ಕೆ.ಮಾಲಗಿತ್ತಿ, ಸಿದ್ದೇಶ ಪೂಜಾರ, ಮಾರುತಿ ಚಾಮಲಾಪುರ, ಚಂದ್ರಪ್ಪ ನಾಯಕ ಸೇರಿದಂತೆ ಇನ್ನೀತರ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: