ಕಟ್ಟಡ ಕಾರ್ಮಿಕರ ಸಮಸ್ಯೆಗಳು ದಾಖಲೆಗಳ ಸಮೇತ ಗಮನಕ್ಕೆ ತಂದರೆ ಪರಿಹರಿಸುತ್ತೇವೆ – ಸುಧಾ ಗರಗ
.
ಕೊಪ್ಪಳ : . ಜಿಲ್ಲೆಯ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ದಾಖಲೆ ಸಮೇತ ಗಮನಕ್ಕೆ ತಂದರೆ ಪರಿಹರಿಸುವುದಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿಯ ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಹಾಗೂ ತಾಲೂಕ ಘಟಕಗಳ ಮುಖಂಡರ ನಿಯೋಗದೊಂದಿಗೆ ಜಿಲ್ಲೆಯ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ನಡೆದ ಚರ್ಚೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ಆಶ್ವಾಸನೆ ನೀಡಿದರು.
ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್ ಮಾತನಾಡಿ ಜಿಲ್ಲೆಯ ನೊಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯಕ್ಕಾಗಿ ಅರ್ಜಿ ಹಾಕಿ ಸುಮಾರು ತಿಂಗಳುಗಳಾಗಿದೆ. ಆದಷ್ಟು ತೀವ್ರದಲ್ಲಿ ವಿಲೇವಾರಿಯಾಗಬೇಕು. ಕೆಲವು ಕಟ್ಟಡ ಕಾರ್ಮಿಕರು ಶೈಕ್ಷಣಿಕ ಧನ ಸಹಾಯಕ್ಕಾಗಿ ಅರ್ಜಿ ಹಾಕಿ ವರ್ಷಗಳಾದರೂ ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗುತ್ತಿಲ್ಲ. ಶ್ರಮ ಸಾಮರ್ಥ್ಯ ಯೋಜನೆ ಅಡಿಯಲ್ಲಿ ತರಬೇತಿ ಪಡೆದ ಕಟ್ಟಡ ಕಾರ್ಮಿಕರಿಗೆ ದಿನದ ಭತ್ಯೆ ಬ್ಯಾಂಕುಗಳಲ್ಲಿ ಜಮಾ ಆಗಿಲ್ಲ ಮುಂತಾದ ಸಮಸ್ಯೆಗಳ ಬಗ್ಗೆ ಸರಿಯಾಗಿ ಪರಿಶೀಲಿಸಿ.ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕ ಸಂಚಾಲಕರಾದ ನೂರ್ ಸಾಬ್ ಹೊಸಮನಿ ಮಾತನಾಡಿ ಕಟ್ಟಡ ಕಾರ್ಮಿಕರಿಗೆ ಮಾಸಿಕ ನಿವೃತ್ತಿ ವೇತನ ಸ್ಥಗಿತಗೊಂಡು. ತಾಂತ್ರಿಕ ಸಮಸ್ಯೆಗಳು ಉಲ್ಬಣಗೊಂಡಿವೆ ಎಂದು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಮಾತನಾಡಿ ಸದ್ಯ ಈಗ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯ ಮಂಜೂರಾತಿಗಾಗಿ ದಾಖಲೆ ಪರಿಶೀಲನಾ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಆಯಾ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಲ್ಲಿ ಹಣ ಜಮಾವಾಗುತ್ತದೆ. ಕಟ್ಟಡ ಕಾರ್ಮಿಕರು ಯಾವುದೇ ಸೌಲಭ್ಯಕ್ಕೆ ಅರ್ಜಿ ಹಾಕಿ ಬಹಳ ದಿನಗಳಾಗಿದ್ದಲ್ಲಿ ದಾಖಲೆಗಳ ಸಮೇತ ಗಮನಕ್ಕೆ ತಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಶ್ರಮ ಸಾಮರ್ಥ್ಯ ಯೋಜನೆ ಅಡಿಯಲ್ಲಿ ತರಗತಿ ಪಡೆದಂತಹ ಫಲಾನುಭವಿಗಳಿಗೆ ದಿನದ ಭತ್ಯೆ ಗಾಗಿ ನಿರ್ಮಿತಿ ಕೇಂದ್ರದಲ್ಲಿ ಸಂಪರ್ಕಿಸಲು ತಿಳಿಸಿ. ಕಟ್ಟಡ ಕಾರ್ಮಿಕರ ನಿವೃತ್ತಿ ವೇತನ ಸ್ಥಗಿತಗೊಂಡಲ್ಲಿ ಕಲಬುರಗಿಯ ಕಾರ್ಮಿಕರ ಕಚೇರಿಗೆ ದಾಖಲೆಗಳನ್ನು ಕಳುಹಿಸಿ ಎಂದು ಸೂಚಿಸಿ ಜಿಲ್ಲೆಯ ಕಟ್ಟಡ ಕಾರ್ಮಿಕರ ಯಾವುದೇ ಸಮಸ್ಯೆಗಳಿದ್ದರೂ ದಾಖಲೆಗಳ ಸಮೇತ ನಮ್ಮ ಗಮನಕ್ಕೆ ತಂದರೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಕಳುಹಿಸಿಕೊಟ್ಟು ಸಮಸ್ಯೆಗಳನ್ನು ನಿವಾರಣೆಗೆ ಪ್ರಯತ್ನಿಸುವುದಾಗಿ ಹೇಳಿದರು.
ನಿಯೋಗದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ತಾಲೂಕ ಸಂಘಟನಾ ಸಂಚಾಲಕ ಮೌಲಾ ಹುಸೇನ್ ಹಣಗಿ. ಗಿಣಿಗೇರಾ ಗ್ರಾಮ ಘಟಕದ ಅಧ್ಯಕ್ಷ ರಾಜಣ್ಣ ಚೌಹಾಣ್ ಮುಂತಾದವರು ಭಾಗವಹಿಸಿದ್ದರು.
Comments are closed.