ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ವಿಜಿಲೆನ್ಸ್ ಸಮಿತಿ ಸಭೆ

Get real time updates directly on you device, subscribe now.

 ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಫಾಯಿ ಕರ್ಮಚಾರಿಗಳ ಜಿಲ್ಲಾಮಟ್ಟದ ವಿಜಿಲೆನ್ಸ್ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಸಫಾಯಿ ಕರ್ಮಚಾರಿಗಳಿಗೆ ವೈದ್ಯಕೀಯ ವೆಚ್ಚ ಮಂಜೂರು ಮಾಡುವುದು ಮತ್ತು ಅರ್ಹ ಪೌರ ಕಾರ್ಮಿಕರಿಗೆ ದಫೇದಾರ ಹುದ್ದೆಗೆ ಮುಂಬಡ್ತಿ ನೀಡುವ ಪ್ರಕ್ರಿಯೆಯನ್ನು ವಿಳಂಬಕ್ಕೆ ಅವಕಾಶವಿಲ್ಲದ ಹಾಗೆ ನಡೆಸಬೇಕು ಎಂದು ನಗರ ಸ್ಥಳೀಯ ಸಂಸ್ಥಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳು ಇರುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊರತೆ ಇರುವ ಕಡೆಗಳಲ್ಲಿ ಅನುದಾನ ಕಾಯ್ದಿರಿಸಿ ನಿಯಮಾನುಸಾರ ಖರೀದಿ ಪ್ರಕ್ರಿಯೆ ನಡೆಸಬೇಕು. ಮ್ಯಾನುಯೆಲ್ ಸ್ಕಾö್ಯವೆಂಜರ್ ಪದ್ಧತಿ ನಿಷೇಧದ ಬಗ್ಗೆ ಜಾಗೃತಿ ಮೂಡಿಸಬೇಕು. ಯಾವುದೇ ಕಡೆಗಳಲ್ಲಿ ಮ್ಯಾನುಯೆಲ್ ಸ್ಕಾö್ಯವೆಂಜರಗಳು ಇರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯ ವಿವಿಧೆಡೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ಕಾರ್ಮಿಕ ಕಾಯ್ದೆಯನುಸಾರ ವೇತನ ಸಕಾಲಕ್ಕೆ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಅವರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಬೇಕು. ಉಪಹಾರ ಹಾಗೂ ಹ್ಯಾಂಡ್ ಗ್ಲೌಸ್ ಮತ್ತು ಇನ್ನೀತರ ಸೌಲಭ್ಯಗಳನ್ನ ಸರಿಯಾಗಿ ನೀಡಬೇಕು. ಗುಣಮಟ್ಟದ ಸಾಮಗ್ರಿ ವಿತರಣೆಗೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಪೌರ ಕಾರ್ಮಿಕ ನಗರದಲ್ಲಿ ಗುಣಮಟ್ಟದ ಸೋಲಾರ ದೀಪಗಳನ್ನು ಅಳವಡಿಸಬೇಕು. ಅಲ್ಲಿನ ರಸ್ತೆಗಳನ್ನು ಸರಿಪಡಿಸಬೇಕು. ಒಳಚರಂಡಿ ಕಾಮಗಾರಿಯನ್ನು ನಡೆಸಬೇಕು. ಅಲ್ಲಿ ಹಾಕಿರುವ ಹೈಮಾಸ್ಟ್ ಲೈಟಗಳನ್ನು ಸರಿಪಡಿಸಬೇಕು. ಪೌರ ಕಾರ್ಮಿಕರ ವಿಶ್ರಾಂತಿ ಗೃಹಕ್ಕೆ ಎಲ್ಲಾ ಅಗತ್ಯ ಸೌಕರ್ಯ ಕಲ್ಪಿಸಬೇಕು. ದಿನಗೂಲಿ ನೌಕರರಾಗಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ನೌಕರರ ಕುಟುಂಬದವರಿಗೆ ತಾತ್ಕಾಲಿಕ ಉದ್ಯೋಗ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಮ್ಯಾನೆಯೆಲ್ ಸ್ಕಾö್ಯವೆಂಜರ್ ನೇಮಕಾತಿ ನಿಷೇಧ ಮತ್ತು ಅದರ ಪುನರ್ವಸತಿ ಕಾಯಿದೆ ಅನುಷ್ಠಾನದ ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿಯ ಸದಸ್ಯರಾದ ರಗಡಪ್ಪ ಹುಲಿಹೈದರ್ ಅವರು ಸಭೆಗೆ ತಿಳಿಸಿದರು.
ಪೌರ ಕಾರ್ಮಿಕ ನೌಕರರ ವೇತನದಲ್ಲಿ ಕಡಿತಗೊಂಡಿರುವ ಇಎಸ್‌ಐ ಮತ್ತು ಇಪಿಎಫ್ ಹಣವನ್ನು ಸಂಬAಧಿಸಿದ ಇಲಾಖೆಗೆ ಸಲ್ಲಿಸಬೇಕು. ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು. ಪ್ರತಿ ತಿಂಗಳು ಸಂಕಷ್ಟ ಭತ್ಯೆ ನೀಡಬೇಕು ಎಂಬುದು ಸೇರಿದಂತೆ ಇನ್ನೀತರ ಬೇಡಿಕೆಗಳನ್ನು ಸಮಿತಿಯ ಸದಸ್ಯರಾದ ಕಾಶಪ್ಪ ಚಲವಾದಿ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ನಗರಸಭೆ ಪೌರಾಯುಕ್ತರದ ಗಣಪತಿ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ವಿವಿಧ ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಹಾಗೂ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!