ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲು ವೇಳಾಪಟ್ಟಿ ಪ್ರಕಟ

Get real time updates directly on you device, subscribe now.

): ಅಕ್ಟೋಬರ್ 05 ರಂದು ಜರುಗಿದ 2023-24ನೇ ಸಾಲಿನ 119ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ನಿರ್ಣಯದಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ನಿಂತಿರುವ ಬೆಳೆಗಳನ್ನು ಸಂರಕ್ಷಿಸಲು ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣವನ್ನು ಅಂದಾಜಿಸಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿರುತ್ತದೆ.
ಅದರಂತೆ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಅಕ್ಟೋಬರ್ 01 ರಿಂದ ನವೆಂಬರ್ 30 ರವರೆಗೆ ಲಭ್ಯತೆ ಅನುಸಾರ 4100 ಕ್ಯೂಸೆಕ್ಸ್ ನೀರನ್ನು ಹರಿಸುವುದನ್ನು ಮುಂದುವರೆಸಲಾಗುವುದು. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ  ಅ.01 ರಿಂದ ನವೆಂಬರ್ 10 ರವರೆಗೆ ( Including Losses    ) 1000 ಕ್ಯೂಸೆಕ್ಸ್ನಂತೆ ಲಭ್ಯತೆ ಅನುಸಾರ ನೀರು ಹರಿಸುವುದನ್ನು ಮುಂದುವರಿಸಲಾಗುವುದು. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಅ.01 ರಿಂದ ನವೆಂಬರ್ 30 ರವರೆಗೆ 750 ಕ್ಯೂಸೆಕ್ಸ್ನಂತೆ ( Including Losses    ) ನೀರು ಹರಿಸಲಾಗುವುದು. ರಾಯ ಬಸವಣ್ಣ ಕಾಲುವೆಗೆ ಅ.01 ರಿಂದ ಡಿಸೆಂಬರ್ 10 ರವರೆಗೆ 200 ಕ್ಯೂಸೆಕ್ಸ್ನಂತೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು. ಪ್ರಸ್ತುತ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವುದರಿಂದ ಡಿಸೆಂಬರ್ 10 ರಿಂದ 2024ರ ಫೆಬ್ರವರಿ 10 ರವರೆಗೆ ನೀರು ಸ್ಥಗಿತಗೊಳಿಸಲಾಗುವುದು. ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30 ರವರೆಗೆ 23 ಕ್ಯೂಸೆಕ್ಸ್ನಂತೆ ಜಲಾಶಯದ ನೀರಿನ ಮಟ್ಟ 1600 ಅಡಿ ತಲುಪುವವರೆಗೆ/ಲಭ್ಯತೆಯನುಸಾರ ಮುಂಬರುವ ಒಳಹರಿವನ್ನು ಪರಿಗಣಿಸಿ ನೀರು ಹರಿಸುವುದನ್ನು ಮುಂದುವರೆಸಲಾಗುವುದು.
ತುAಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ನಿಗದಿತ ಬೆಳೆಗಳನ್ನು ಸಂರಕ್ಷಿಸಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ.
ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಆವಲಂಬಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕೃತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುನಿರಾಬಾದ್ ಕನೀನಿನಿ ತುಂಗಭದ್ರಾ ಯೋಜನಾ ವೃತ್ತದ  ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!