ವಿದ್ಯಾರ್ಥಿ ವಸತಿ ನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಲು ಅಧಿಕಾರಿಗಳಿಗೆ ಜಿಪಂ ಸಿಇಓ ಸೂಚನೆ

Get real time updates directly on you device, subscribe now.

 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 25ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳಡಿ ನಡೆಯುವ ವಸತಿ ನಿಲಯಗಳ ನಿಲಯಪಾಲಕರ ಸಭೆ ನಡೆಯಿತು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಜಿಲ್ಲೆಯ ವಿವಿಧೆಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆ-ಕಾಲೇಜುಗಳ ನಿರ್ವಹಣೆಗೆ ಸಂಬAಧಿಸಿದAತೆ ಇರುವ ಸಮಸ್ಯೆಗಳ ಕುರಿತು ಇದೆ ವೇಳೆ ಸಿಇಓ ಅವರು ಸಮಗ್ರ ಚರ್ಚಿಸಿದರು.
ಇದೆ ವೇಳೆ ಮಾತನಾಡಿದ ಸಿಇಓ ಅವರು, ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಒಂದು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಮತ್ತು ನಿಯಲಪಾಲಕರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳ ಹಂತದಲ್ಲಿಯೆ ಬಗೆಹರಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಿಲಯಪಾಲಕರಿಗೆ ಸೂಚನೆ: ಮೇನುಚಾಟ್ ಪ್ರಕಾರವೇ ವಿದ್ಯಾರ್ಥಿಗಳಿಗೆ ಊಟ ಮತ್ತು ಉಪಹಾರ ನೀಡಲು ಹಾಗೂ ವಸತಿ ನಿಲಯಗಳಲ್ಲಿ ಶುಚಿತ್ವ ಕಾಪಾಡಬೇಕು ಎಂದು ಇದೆ ವೇಳೆ ಸಿಇಓ ಅವರು ನಿಲಯ ಪಾಲಕರುಗಳಿಗೆ ಸೂಚನೆ ನೀಡಿದರು. ಆಯಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ನೀಡಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಅಗತ್ಯವಿರುವ ಪುಸ್ತಕಗಳನ್ನು ಖರೀದಿಸಲು ಸೂಚಿಸಿದರು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಜಯಕುಮಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ನಿಲಯ ಪಾಲಕರು ಇದ್ದರು.

Get real time updates directly on you device, subscribe now.

Comments are closed.

error: Content is protected !!