ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಗೆ ಕ್ರಮ ಕೈಗೊಳ್ಳಿ: ಸಂಸದ ಸಂಗಣ್ಣ ಕರಡಿ

Get real time updates directly on you device, subscribe now.

ಸಂಸದರಿಂದ ಕೊಪ್ಪಳ-ಕುಷ್ಟಗಿ ಮುಖ್ಯ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ

 ನಗರದ ರೈಲ್ವೇ ಗೇಟ್ ನಂ.66(ಕೊಪ್ಪಳ-ಕುಷ್ಟಗಿ ಜಿಲ್ಲಾ ಮುಖ್ಯ ರಸ್ತೆ) ನಲ್ಲಿ ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರಾದ ಸಂಗಣ್ಣ ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರದಂದು ನಗರದ ರೈಲ್ವೆ ಗೇಟ್ ನಂ. 66  (ಕೊಪ್ಪಳ-ಕುಷ್ಟಗಿ ಜಿಲ್ಲಾ ಮುಖ್ಯ ರಸ್ತೆ) ರಸ್ತೆಯಲ್ಲಿನ ಮೇಲ್ಸೇತುವೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಅವರು ಮಾತನಾಡಿದರು.
ರೇಲ್ವೇ ಗೇಟ್ ಇಂದ ಗವಿಮಠ ಕಡೆಯ ರಸ್ತೆಯಲ್ಲಿನ ಮೇಲ್ಸೇತುವೆ ಕಾಮಗಾರಿಗೆ ಸಾರ್ವಜನಿಕ ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡುವ ಅವಶ್ಯಕತೆ ಇದೆ. ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮುಕ್ತಾಯಗೊಳಿಸುವಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಹಾಗೂ ಮೇಲ್ವಿಚಾರಣೆ ಅವಶ್ಯವಿದ್ದು, ಇನ್ನೆರಡು ದಿನಗಳಲ್ಲಿ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲು ಸಭೆಯನ್ನು ಕರೆದು ಸಾರ್ವಜನಿಕ ಸಂಚಾರಕ್ಕಾಗಿ ಮಾರ್ಗ ಬದಲಾವಣೆಯನ್ನು ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ರೈಲ್ವೇ ಅಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!