ರೋಗಿಗಳಿಗೆ ತಾರತಮ್ಯ ಮಾಡದೇ ಸೂಕ್ತ ಚಿಕಿತ್ಸೆ ನೀಡಬೇಕು; ಶಾಸಕ ದೊಡ್ಡನಗೌಡ ಪಾಟೀಲ್ ವೈದ್ಯರಿಗೆ ತಾಕೀತು

Get real time updates directly on you device, subscribe now.

ಪ್ರತಿಯೊಬ್ಬ ವೈದ್ಯರು
ಕುಷ್ಟಗಿ 07; ಪ್ರತಿಯೊಬ್ಬ ವೈದ್ಯರು ರೋಗಿಗಳಿಗೆ ತಾರತಮ್ಯ ಮಾಡದೇ ಹೊರ ರೋಗಿ ವಿಭಾಗದಲ್ಲಿ ಕುಳಿತು ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ವೈದ್ಯರಿಗೆ ತಾಕೀತು ಮಾಡಿದರು.
ಬುಧವಾರ ಬೆಳಿಗ್ಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಮಾಡಿ ಕಲುಷಿತ ನೀರು ಸೇವಿಸಿ ವಾಂತಿ ಬೇದಿಯಿಂದ ಬಳಲುತ್ತಿದ್ದ ತಾಲೂಕಿನ ವಿವಿಧ ಗ್ರಾಮದ ರೋಗಿಗಳ ಯೋಗಕ್ಷೇಮ ವಿಚಾರಿಸಿ ನಂತರ ವೈದ್ಯರೊಂದಿಗೆ ಮಾತನಾಡಿದ ಅವರು ಕುಷ್ಟಗಿ ಪಟ್ಟಣದ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಉಂಟಾದರೆ ಬೇರೆ ಆಸ್ಪತ್ರೆಗಳಿಂದ ತಾತ್ಕಾಲಿಕವಾಗಿ ವೈದ್ಯರನ್ನು ನಿಯೋಜಿಸಿ ವಾಂತಿ ಬೇದಿಯಿಂದ ಬಳಲುತ್ತಿರುವ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಹತೋಟಿಗೆ ತರಬೇಕು ಎಂದು ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್ ರಡ್ಡಿ ಅವರಿಗೆ ಸೂಚಿಸಿದರು.
ವೈದ್ಯರು ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿ ವರ್ಗದವರು ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು.
ಔಷಧ ಕೊರತೆ ಉಂಟಾಗದಂತೆ ಎಚ್ಚರವಹಿಸಿ ದಾಸ್ತಾನು ಮಾಡಿಕೊಳ್ಳುವಂತೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರ ಅವರಿಗೆ ಸಲಹೆ ನೀಡಿದರು.
ಜುಮಲಾಪೂರ, ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಸುಮಾರು 60 ಕ್ಕು ಹೆಚ್ಚು ಜನರು ಅಸ್ತವ್ಯಸ್ತರಾಗಿದ್ದರು ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಬೀಡು ಬಿಟ್ಟು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿ ಹತೋಟಿಗೆ ತರಲಾಗಿದೆ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರ ಶಾಸಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಗನಗೌಡ ಜೈನರ್, ಕೆ.ಮಹೇಶ, ಶುಖಮುನಿ ಸ್ವಾಮಿ ಗುರವಿನ, ನೌಕರರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ, ಕಾಸೀಮಪ್ಪ ಬಿಜಕಲ್ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!