ಡಾ. ಮುಮ್ತಾಜ ಬೇಗಂ ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘ ಪ್ರಶಸ್ತಿ
.
ಗಂಗಾವತಿ,ನ 03-
ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಕರ್ನಾಟಕ ಸಂಘ 2022 ನೇ ಸಾಲಿನ ಪುಸ್ತಕ ಬಹುಮಾನ ಘೋಷಿಸಿದೆ.
ಗಂಗಾವತಿಯ ಹಿರಿಯ ಸಾಹಿತಿ, ಲೇಖಕಿ ಸಹಾಯಕ ಪ್ರಾಧ್ಯಾಪಕಿ ಡಾ. ಮುಮ್ತಾಜ್ ಬೇಗಂ ಅವರ ಲೋಕವೇ ತಾನಾದ ಬಳಿಕ ಕೃತಿಗೆ ಮಹಿಳಾ ಸಾಹಿತ್ಯ ವಿಭಾಗದಲ್ಲಿ ಪ್ರಶಸ್ತಿ ಘೋಷಣೆಯಾಗಿದೆ.
ಪ್ರಶಸ್ತಿಯೂ ನಗದು 10,000 ರೂಪಾಯಿ ಹಾಗೂ ಪ್ರಶಸ್ತಿ ಪ್ರಮಾಣ ಪತ್ರ ಒಳಗೊಂಡಿರುತ್ತದೆ. ನವೆಂಬರ್ 26 ರಂದು ಸಂಜೆ ಶಿವಮೊಗ್ಗ ಕರ್ನಾಟಕ ಸಂಘದ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್. ಸುಂದರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.