ಪಿಎಸ್ಐ ಸುನೀಲ್ ಅತ್ಯಂತ ಕ್ರೀಯಾಶೀಲ ವ್ಯಕ್ತಿ; ಸಿಪಿಐ ನಿಂಗಪ್ಪ ರುದ್ರಪ್ಪಗೋಳ
ಕುಷ್ಟಗಿ 07; ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪಿಎಸ್ಐ ಸುನೀಲ್ ಅವರ ಅತ್ಯಂತ ಕ್ರೀಯಾಶೀಲರಾಗಿ ಕರ್ತವ್ಯ ನಿರ್ವಹಸಿದ್ದಾರೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಹೇಳಿದರು.
ತಾಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಇಲ್ಲಿನ ಸಿಪಿಐ ಕಚೇರಿಯಲ್ಲಿ ಏರ್ಪಡಿಸಿದ್ದ ಬಿಳ್ಕೋಡಿಗೆ ಸಮಾರಂಭದಲ್ಲಿ ಮಾತನಾಡಿದ ಅವರು ಚುನಾವಣಾ ಪ್ರಯುಕ್ತ ಸುನೀಲ್ ಅವರನ್ನು ರಾಯಚೂರಿನಿಂದ ಹನುಮಸಾಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದರು.
ಮೇಲಾಧಿಕಾರಿಗಳ ಆದೇಶದಂತೆ ಬುಧವಾರ ಮರಳಿ ರಾಯಚೂರಿಗೆ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಅತಿದೊಡ್ಡ ಪೊಲೀಸ್ ಠಾಣೆ ಹನುಮಸಾಗರವಾಗಿದ್ದು ಆ ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪ್ರಾಮಾಣಿಕ ಸೇವೆಸಲ್ಲಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಷ್ಟಗಿ ಪಿಎಸ್ಐ ಮೌನೇಶ ರಾಠೋಡ ಹಾಗೂ ಸಿಪಿಐ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Comments are closed.