ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಸಂಸದ ಸಂಗಣ್ಣ ಹರ್ಷ
ಕೊಪ್ಪಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದಿರುವುದು ಸಂತಸವಾಗಿದೆ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂತನವಾಗಿ ಆಯ್ಕೆಯಾದ ವಿಜಯೇಂದ್ರ ಅವರು ಯುವನಾಯಕರಾಗಿದ್ದು, ಪಕ್ಷ ಸಂಘಟಕರಾಗಿ ರಾಜ್ಯಾದ್ಯಂತ ಹೆಸರು ಗಳಿಸಿದ್ದಾರೆ. ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಸ್ವಾಗತಾರ್ಹ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ 28 ಸ್ಥಾನ ಬಿಜೆಪಿ ಗೆಲ್ಲುವುದು ಖಚಿತ ಎಂದರು.
ವಿಜಯೇಂದ್ರ ಯಡಿಯೂರಪ್ಪ ಅವರು ಉಪಚುನಾವಣೆಗಳಲ್ಲಿ ಪಕ್ಷ ಸಂಘಟನೆ ಮಾಡಿ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಿದ್ದರು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ವಿಜಯೇಂದ್ರ ಅವರ ತಂತ್ರಗಾರಿಕೆ ಪ್ರಮುಖವಾಗಿತ್ತು. ಅಂತಹ ಯುವನಾಯಕರಿಗೆ ಪಕ್ಷ ಅತ್ಯುನ್ನತ ಹುದ್ದೆ ನೀಡಿರುವುದು ಹರ್ಷದ ಸಂಗತಿ. ಈ ಮೂಲಕ ಯುವ ಜನತೆಯನ್ನು ಬಿಜೆಪಿ ರಾಜಕೀಯವಾಗಿ ಬೆಳಸುತ್ತಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುವುದು ಎಂದರು.
ರಾಜ್ಯದಲ್ಲಿ ಸಮರ್ಪಕವಾಗಿ ಬರ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇನ್ನು ಭ್ರಷ್ಟಾಚಾರ ಸೇರಿದಂತೆ ಹಲವಾರು ವಿಚಾರಗಳ ವಿರುದ್ದ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.
Comments are closed.