ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಶುಭಕೋರಿದ ಅಮರೇಶ್ ಕರಡಿ

Get real time updates directly on you device, subscribe now.

ಕೊಪ್ಪಳ: ನೂತನವಾಗಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಕೊಪ್ಪಳದ ಬಿಜೆಪಿ ಮುಖಂಡರಾದ ಅಮರೇಶ್ ಕರಡಿ ಭೇಟಿ ಮಾಡಿ ಶುಭಕೋರಿದರು.
ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ಸಂಜೆ ಭೇಟಿಯಾದ ಅಮರೇಶ್ ಕರಡಿ ಅವರು, ಹೂ ಗುಚ್ಛ ನೀಡಿ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವನಾಯಕ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸವಾಗಿದೆ. ಅವರ ತಂತ್ರಗಾರಿಕೆ ಹಾಗೂ ಸಂಘಟೆಯಿಂದ ಲೋಕಸಭೆಯಲ್ಲಿ ರಾಜ್ಯದಿಂದ 28 ಸ್ಥಾನ ಬಿಜೆಪಿ ಗೆಲ್ಲಲಿದೆ. ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು. ಕೊಪ್ಪಳ ಲೋಕಸಭಾ ಚುನಾವಣೆ ಯಲ್ಲಿ ಈ ಬಾರಿಯೂ ಬಿಜೆಪಿ ಜಯಗಳಿಸಲಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಿಜೆಪಿ ಹೈ ಕಮಾಂಡ್‌ ಗೆ ಧನ್ಯವಾದಗಳು ಎಂದರು.

Get real time updates directly on you device, subscribe now.

Comments are closed.

error: Content is protected !!