ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ವಿಚಾರ ಸಂಕಿರಣ ಬೆಂಗಳೂರಿನಲ್ಲಿ ನ.16ಕ್ಕೆ

Get real time updates directly on you device, subscribe now.

 ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಕೃತಕ ಬುದ್ಧಿಮತ್ತೆಯ ಕಾಲಘಟ್ಟದಲ್ಲಿ ಮಾಧ್ಯಮಗಳು ಎಂಬ ವಿಷಯಕ್ಕೆ ಸಂಬAಧಪಟ್ಟAತೆ ವಿಚಾರ ಸಂಕಿರಣವನ್ನು ಬೆಂಗಳೂರಿನ ವಾರ್ತಾ ಇಲಾಖೆಯ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11.30ಕ್ಕೆ ಹಮ್ಮಿಕೊಳ್ಳಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ನಡೆಯುವ ಈ ವಿಚಾರ ಸಂಕಿರಣವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪದನಿಮಿತ್ತ ಅಧ್ಯಕ್ಷರಾದ ಜಯರಾಮ್ ಎನ್ ಅವರು ಉದ್ಘಾಟಿಸುವರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿAಬಾಳ್ಕರ್ ಅವರು ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ವಿಜ್ಞಾನ ಅಂಕಣಕಾರರಾದ ಟಿ.ಜಿ.ಶ್ರೀನಿಧಿ ಹಾಗೂ ತಂತ್ರಾAಶ ಪರಿಣಿತರಾದ ಕಾವ್ಯಶ್ರೀ ತಿಮ್ಮಯ್ಯ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರಿನ ಸುದ್ದಿ ಮತ್ತು ಪತ್ರಿಕಾ ಶಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡಿ.ಡೊಳ್ಳಿನ ಅವರು ಹಾಗೂ ಬೆಂಗಳೂರಿನ ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಿ.ರೂಪಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!