ಇಂದಿನಿAದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳು

Get real time updates directly on you device, subscribe now.

ಕೊಪ್ಪಳ ಜಿಲ್ಲೆಯಲ್ಲಿ ನವೆಂಬರ್ 14 ರಿಂದ ನವೆಂಬರ್ 20ರವರೆಗೆ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
70ನೇ ಅಖಿಲ ಭಾರತ ಸಹಕಾರ ಸಪ್ತಾಹ-2023ರ ಮುಖ್ಯಧ್ಯೇಯವು 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃಧ್ಧಿ ಗುರಿಗಳು ಎಂಬುದಾಗಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಕೊಪ್ಪಳ ಸಹಕಾರ ಇಲಾಖೆ ಮತ್ತು ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 7 ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿವೆ.
ಸಹಕಾರ ಸಂಘಗಳ ಉಪನಿಬಂಧಕರ ಮನವಿ: 7 ದಿನಗಳಲ್ಲಿ ಕಡ್ಡಾಯವಾಗಿ ಸಹಕಾರ ಸಂಘಗಳ ಕಟ್ಟಡದ ಮೇಲೆ ಸಪ್ತವರ್ಣದ ಸಹಕಾರ ಬಾವುಟವನ್ನು ಹಾರಿಸುವುದರೊಂದಿಗೆ ಸಹಕಾರ ಕ್ಷೇತ್ರದ ಅಸ್ತಿತ್ವವನ್ನು ಸಾರ್ವಜನಿಕರಿಗೆ ತೋರಿಸಿಕೊಡಬೇಕು. ಅಂದಿನ ದಿನಗಳಲ್ಲಿ ಹಿರಿಯ ಸಹಕಾರಿಗಳಿಗೆ ಅವರ ಸೇವೆಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ, ಹೊಸ ಯೋಜನೆಗಳ ಅನುಷ್ಠಾನ ಮುಂತಾದ ನೈಜ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ಈ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ ಹಾಗೂ ಸಹಕಾರಿಗಳಿಗೆ ಉಪಯುಕ್ತವಾಗುವಂಥಹ ಉಚಿತ ಆರೋಗ್ಯ ತಪಾಷಣೆ ಶಿಬಿರ, ಲಸಿಕೆ ಕಾರ್ಯಕ್ರಮ, ರಕ್ತದಾನ ಶಿಬಿರ, ಸಹಕಾರ ಸಂಘಗಳು ಎದುರಿಸುತ್ತಿರುವ ಸವಾಲುಗಳು, ಸವಾಲುಗಳನ್ನು ಎದುರಿಸಲು ಅಗತ್ಯವಾದ ಮಾರ್ಗೋಪಾಯಗಳು, ಸಂವಾದ ಕಾರ್ಯಕ್ರಮಗಳು, ವಿಡಿಯೋ ಕಾನ್ಪರೆನ್ಸ್, ವೆಬಿನಾರ್ ಮುಂತಾದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ಕಾರಣ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಯು ಕಾರ್ಯಕ್ರಮ ಜರುಗುವ ಸ್ಥಳದಲ್ಲಿ ಹಾಜರಾಗಿ ಸಹಕಾರ ಚಳುವಳಿಯನ್ನು ಬಲಪಡಿಸಲು ಕೋರಲಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಮನವಿ ಮಾಡಿದ್ದಾರೆ.
ಸಂವಾದ ಯಾವಾಗ?: “ಸಹಕಾರ ಸಂಘ ಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು” ಕುರಿತು ನ.14ರಂದು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ. ಅದೇ ರೀತಿ “ಸಾಲೇತರ ಸಹಕಾರ ಸಂಘಗಳ ಪುನಃಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ” ಕುರಿತು ನ.15ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುಮಗೇರಾದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ. “ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ ವಿಷಯ ಕುರಿತು ನ.16ರಂದು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಶಿರೂರು ತಾ.ಕುಕನೂರು ಇವರ ಸಭಾಂಗಣದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ. “ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು ವಿಷಯ ಕುರಿತು ನ.17ರಂದು ಬಾಪೂಜಿ ವಿವಿದೋದ್ದೇಶ ಸಹಕಾರ ಸಂಘ ಗಂಗಾವತಿ ಇವರಿಂದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ. “ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು ವಿಷಯ ಕುರಿತು ನ.18 ರಂದು ಶ್ರೀ ಲಕ್ಷಿö್ಮÃ ವೆಂಕಟೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘ ಕಾರಟಗಿ ಅವರಿಂದ ಎಲ್.ವಿ.ಟಿ ಕಲ್ಯಾಣ ಮಂಟಪ ಕಾರಟಗಿ ಸಭಾಂಗಣದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ. “ಮಹಿಳೆಯರು, ಯುವಜನ ಮತ್ತು ಅಬಲವರ್ಗಕ್ಕೆ ಸಹಕಾರ ಸಂಸ್ಥೆಗಳು ವಿಷಯ ಕುರಿತು ನ19ರಂದು ಶ್ರೀಜೈದೇವ ಪತ್ತಿನ ಸಹಕಾರ ಸಂಘ ಕೊಪ್ಪಳ ಇವರಿಂದ ಗಾಣಿಗರ ಸಮುದಾಯ ಭವನ ಕೊಪ್ಪಳದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ. “ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ ವಿಷಯ ಕುರಿತು ನ.20ರಂದು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಬೆಳ್ಳಿಗ್ಗೆ 11 ಗಂಟೆಗೆ ಸಂವಾದ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: