ಇಸ್ಪೇಟ್ ಜೂಜಾಟ: 34 ಪ್ರಕರಣ,244 ಜನರ ಮೇಲೆ ಕಾನೂನು ಕ್ರಮ ರೂ.360510 ಹಣ, ಸಾಮಗ್ರಿ ಜಪ್ತಿ

Get real time updates directly on you device, subscribe now.

ಕೊಪ್ಪಳ ಜಿಲ್ಲೆಯಾದ್ಯಂತ ದಿನಾಂಕ-12.11.2023 ರಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಪ್ರದಾಯವೆಂಬಂತೆ ಕಾನೂನು ಬಾಹೀರ ಇಸ್ಪೀಟ್ ಜೂಜಾಟದಲ್ಲಿ ತೊಡಗದಿರಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು ಮತ್ತು ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಮಾಡಲಾಗಿತ್ತು,

ಜಿಲ್ಲೆಯಾದ್ಯಂತ ಈ ಕುರಿತು ವಿಶೇಷ ಕಾರ್ಯಾಚರಣೆ ಕೈಗೊಂಡು ದೀಪಾವಳಿ ಹಬ್ಬದ ನೆಪದಲ್ಲಿ ದಿನಾಂಕ-12.11.2023 ರಿಂದ ಇಲ್ಲಿವರೆಗೆ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ದಾಳಿ ಮಾಡಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಒಟ್ಟು 34 ಪ್ರಕರಣಗಳನ್ನು ದಾಖಲಿಸಿ 244 ಜನರ ಮೇಲೆ ಕಾನೂನು ಕ್ರಮ ಜರುಗಿಸಿ 360510-00 ಜೂಜಾಟದ ನಗದು ಹಣ ಮತ್ತು ಜೂಜಾಟದ ಸಾಮಗ್ರಿಗಳನ್ನು ಜಪ್ತಿಪಡಿಸಿಕೊಂಡಿದ್ದು ಇರುತ್ತದೆ.

ದೀಪಾವಳಿ ಹಬ್ಬದ ನೆಪದಲ್ಲಿ ಯಾರಾದರು ಕಾನೂನು ಬಾಹೀರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ಬಗ್ಗೆ ಮಾಹಿತಿ ಬಂದಲ್ಲಿ ಅಥವಾ ಕಂಡುಬಂದಲ್ಲಿ ಅಂತವರ ಮೇಲೆ ಮತ್ತು ಇದಕ್ಕೆ ಸಹಕರಿಸಿದ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯಶೋದಾ ವಂಟಿಗೋಡಿಯವರು, ಕೊಪ್ಪಳ ತಿಳಿಸಿದ್ದಾರೆ

Get real time updates directly on you device, subscribe now.

Comments are closed.

error: Content is protected !!
%d bloggers like this: