ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು: ಸಾವಿತ್ರಿ ಬಿ.ಕಡಿ
ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಜಿಲ್ಲೆಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಲಿದ್ದು, ಈ ಕಾರ್ಯಕ್ರಮದ ಯಶಸ್ಸಿಗೆ ಸಂಬAಧಿಸಿದ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಜ್ಯೋತಿ ರಥಯಾತ್ರೆಯು ಪ್ರತಿ ತಾಲ್ಲೂಕಿನಲ್ಲಿಯೂ 02 ದಿನಗಳ ಕಾಲ ಸಂಚರಿಸಲಿದೆ. ಪ್ರತಿ ತಾಲ್ಲೂಕಿಗೂ ಪ್ರವೇಶಿಸುವಾಗ ಸರ್ಕಾರದ ನಿರ್ದೇಶನದಂತೆ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಬೇಕು. ಸ್ವಾಗತ ಹಾಗೂ ಮೆರವಣಿಗೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 02 ಕಲಾತಂಡಗಳು ಭಾಗವಹಿಸಲಿದ್ದು, ತಾಲ್ಲೂಕಿಗೆ ಸಂಬAಧಿಸಿದAತೆ ಕಲಾತಂಡಗಳನ್ನು ನಿಯೋಜಿಸಿ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಬೇಕು. ಈ ಕಾರ್ಯಕ್ರಮದಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮವಿರುವುದಿಲ್ಲ. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರಥಯಾತ್ರೆ ಸಂಚರಿಸುವಾಗ ಸಂಬAಧಿಸಿದ ತಾಲ್ಲೂಕಿನ ಜನಪ್ರತಿನಿಧಿಗಳು, ಸಾಹಿತಿಗಳು, ಪ್ರಮುಖ ಸಂಘ ಸಂಸ್ಥೆಗಳು, ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು, ಗ್ರಾಮದ ಹಿರಿಯರು, ಮುಖಂಡರನ್ನು ಶಿಷ್ಠಾಚಾರದಂತೆ ಆಮಂತ್ರಿಸಿ, ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ತಾಲ್ಲೂಕು ತಹಶೀಲ್ದಾರು ಜ್ಯೋತಿ ರಥಯಾತ್ರೆ ಸಂಚರಿಸುವ ಗ್ರಾಮಗಳ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿಕೊಳ್ಳಿ. ಆಯಾ ಗ್ರಾಮದ ಪಿಡಿಒ, ಗ್ರಾಮ ಪಂಚಾಯತಿ ಆಡಳಿತ ಸೇರಿದಂತೆ ಸಂಬAಧಿಸಿದವರೊAದಿಗೆ ಪೂರ್ವಭಾವಿ ಸಭೆ ಆಯೋಜಿಸಿ ವ್ಯವಸ್ಥಿತ ಮೆರವಣಿಗೆಗೆ ಅವಕಾಶ ಕಲ್ಪಿಸಿಕೊಡಿ. ರಥಯಾತ್ರೆಯನ್ನು ಸ್ವಾಗತಿಸಿ ಪೂಜೆ, ಪುಷ್ಪಾರ್ಚನೆ, ಛಾಯಾಚಿತ್ರ ಹಾಗೂ ವಿಡಿಯೋ ಚಿತ್ರೀಕರಣಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡಗಳು ಹಾಗೂ ರಥದೊಂದಿಗೆ ಆಗಮಿಸುವ ಇಬ್ಬರಿಗೆ ತಾಲ್ಲೂಕು ಆಡಳಿತದಿಂದ ಊಟ ಮತ್ತು ವಸತಿಯನ್ನು ಆಯೋಜಿಸಬೇಕು. ಉಳಿದಂತೆ ಮೆರವಣಿಗೆ ಸಂದರ್ಭದ ಭದ್ರತೆ, ಸುಗಮ ಸಂಚಾರ, ಸ್ವಚ್ಛತೆ, ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಯಾವುದೇ ಕೊರತೆಯಾಗದಂತೆ ಒದಗಿಸಬೇಕು. ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳು ತಾಲ್ಲೂಕುಗಳಲ್ಲಿ ಸಂಚರಿಸುವ ರಥಯಾತ್ರೆಯ ಉಸ್ತುವಾರಿಯನ್ನು ಹಾಗೂ ನಗರ ಪ್ರದೇಶದ ರಥಯಾತ್ರೆಯ ಉಸ್ತುವಾರಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ವಹಿಸಲಾಗಿದ್ದು, ಸಂಬAಧಿಸಿದ ಅಧಿಕಾರಿಗಳು ಹೆಚ್ಚಿನ ಮಾಹಿತಿ ಹಾಗೂ ನಿರ್ದೇಶನಗಳಿಗಾಗಿ ಉಸ್ತುವಾರಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ಅವರು ಮಾತನಾಡಿ, ಕನ್ನಡ ಜ್ಯೋತಿ ರಥಯಾತ್ರೆಯು ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ನವೆಂಬರ್ 24 ಮತ್ತು 25 ರಂದು, ಕೊಪ್ಪಳ ತಾಲ್ಲೂಕಿನಲ್ಲಿ ನ.26 ಮತ್ತು 27 ರಂದು, ಕುಕನೂರು ತಾಲ್ಲೂಕಿನಲ್ಲಿ ನ.28 ಮತ್ತು 29 ರಂದು, ಯಲಬುರ್ಗಾ ತಾಲ್ಲೂಕಿನಲ್ಲಿ ನ.30 ಮತ್ತು ಡಿಸೆಂಬರ್ 01 ರಂದು, ಕುಷ್ಟಗಿ ತಾಲ್ಲೂಕಿನಲ್ಲಿ ಡಿಸೆಂಬರ್ 02 ಮತ್ತು 03 ರಂದು, ಕನಕಗಿರಿ ತಾಲ್ಲೂಕಿನಲ್ಲಿ ಡಿಸೆಂಬರ್ 04 ಮತ್ತು 05 ರಂದು ಹಾಗೂ ಕಾರಟಗಿ ತಾಲ್ಲೂಕಿನಲ್ಲಿ ಡಿಸೆಂಬರ್ 06 ಮತ್ತು 07 ರಂದು ಸಂಚರಿಸಲಿದೆ. ಪ್ರತಿ ತಾಲ್ಲೂಕಿನ ಗಡಿಗೆ ಆಗಮಿಸುವಾಗ ತಾಲ್ಲೂಕು ಆಡಳಿತದಿಂದ ರಥಯಾತ್ರೆಯನ್ನು ಸ್ವಾಗತಿಸಿ, ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಷ್ಠಾಚಾರದಂತೆ ತಾಲ್ಲೂಕಿನ ಗಡಿಭಾಗದವರೆಗೆ ರಥವನ್ನು ಬೀಳ್ಕೊಡಬೇಕು. ರಥದ ಆಗಮನ, ಮೆರವಣಿಗೆ ಹಾಗೂ ಬೀಳ್ಕೊಡುಗೆ ಸಂದರ್ಭದಲ್ಲಿ ಆಯಾ ತಾಲ್ಲೂಕಿನ ಜನಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳು, ಮಾಧ್ಯಮದವರು ಭಾಗವಹಿಸುವಂತೆ ಕ್ರಮವಹಿಸಬೇಕು. ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಗೂಗಲ್ ಮೀಟ್‌ನಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯಾರಾಣಿ, ಸೇರಿದಂತೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು
Comments are closed.