ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸಿ : ಡಾ.ಶಂಕ್ರಪ್ಪ ಮೈಲಾರಿ

Get real time updates directly on you device, subscribe now.

: ರಾಷ್ಟಿçÃಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ರೀತಿಯ  ಜಿಲ್ಲಾಮಟ್ಟದ ಹಾಗೂ ತಾಲೂಕ ಮಟ್ಟದ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸಬೇಕು ಎಂದು ಕಲಬುರಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನಾಲಯದ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಶಂಕ್ರಪ್ಪ ಎಸ್.ಮೈಲಾರಿ ಅವರು ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಉಪ-ವಿಭಾಗ ಆಸ್ಪತ್ರೆ ಗಂಗಾವತಿ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರದಂದು ಜಿಲ್ಲೆಯ ಗಂಗಾವತಿ ಉಪ ವಿಭಾಗ ಆಸ್ಪತ್ರೆಯಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಿಗೆ ಐ.ಇ.ಸಿ/ಎಸ್.ಬಿ.ಸಿ.ಸಿ ಕಾರ್ಯಕ್ರಮಗಳ ಪ್ರಗತಿ ಪರಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆಯಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳ ಪಾತ್ರ ಬಹಳ ಮಹತ್ವದ್ದು. ಆರೋಗ್ಯ ಇಲಾಖೆಯ ಎಲ್ಲಾ ಯೋಜನೆಗಳ ಬಗ್ಗೆ ಹಾಗೂ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶದ ಕೊಳಚೆ ಪ್ರದೇಶದ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿದೆ ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಗಳನ್ನು ಮುಟ್ಟಿಸಬೇಕು. ವಿವಿಧ ಹಂತದ ಮಾಧ್ಯಮದ ಮೂಲಕ ಇಲಾಖೆಯ ಯೋಜನೆಗಳನ್ನು ಅವರು ಪಡೆದುಕೊಳ್ಳುವಂತೆ ಮನವೊಲಿಸಬೇಕು ಮತ್ತು ಕಾರ್ಯಕ್ರಮಗಳಿಗೆ ನೀಡಿದ ಅನುದಾನವನ್ನು ಕ್ರಿಯಾಯೋಜನೆ ಪ್ರಕಾರ ಆಯಾ ತಿಂಗಳಲ್ಲಿ ಖರ್ಚು ಮಾಡಿ, ರಾಜ್ಯಮಟ್ಟ ಮತ್ತು ವಿಭಾಗ ಮಟ್ಟಕ್ಕೆ ವರದಿ ಸಲ್ಲಿಸಬೇಕು ಎಂದು ಎಲ್ಲಾ ಜಿಲ್ಲೆಗಳ ಆರೋಗ್ಯ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಲಿಂಗರಾಜು ಟಿ. ಅವರು ಮಾತನಾಡಿ, ಕಲಬುರಗಿ ವಿಭಾಗ ಮಟ್ಟದ ಐ.ಇ.ಸಿ/ಎಸ್.ಬಿ.ಸಿ.ಸಿ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ಮಹತ್ವದ  ಸಭೆಯಾಗಿದೆ. ಎಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ಸಾರ್ವಜನಿಕರಿಗೆ ನಮ್ಮ ಆರೋಗ್ಯ ಇಲಾಖೆಯ ವಿವಿಧ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿ, ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡಲು ಕಂಕಣ ಬದ್ಧರಾಗಬೇಕು. ಇಲಾಖೆಯಲ್ಲಿ ಹೊಸ ಹೊಸ ಕಾರ್ಯಕ್ರಮಗಳು ಬರುತ್ತಿದ್ದು, ಅವುಗಳನ್ನು ಸಾರ್ವಜನಿಕರಿಗೆ ಪ್ರಾಮಾಣಿಕವಾಗಿ ಅರಿವು ಮೂಡಿಸಿ, ತಲುಪಿಸಬೇಕು. ಎಲ್ಲಾ ರೀತಿಯ ಒತ್ತಡಗಳ ಮಧ್ಯದಲ್ಲಿಯೂ ಕಾರ್ಯಕ್ರಮಗಳನ್ನು ತಾವುಗಳು ಗ್ರಾಮಮಟ್ಟದಲ್ಲಿ, ತಾಂಡಾಗಳಲ್ಲಿ ಹಾಗೂ ಸಮಸ್ಯಾತ್ಮಕ ಪ್ರದೇಶಗಳನ್ನು ಗುರುತಿಸಿ, ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ||ಪ್ರಕಾಶ್ ವಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ||ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ||ಶಶಿಧರ್ ಎ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ||ವೆಂಕಟೇಶ್, ತಾಲೂಕಾ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿಗಳಾದ ಡಾ||ಈಶ್ವರ್ ಸವಡಿ, ರಾಜ್ಯಮಟ್ಟದಿಂದ ಬಂದAತ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಞಾನೇಶ್ವರ, ವಿಭಾಗ ಮಟ್ಟದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ್ ಹಾಗೂ ರಾಜ್ಯಮಟ್ಟದ ಇತರೆ ಅಧಿಕಾರಿಗಳು, 07 ಜಿಲ್ಲೆಗಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ, ಈಶ್ವರ ದಾಸಪ್ಪನವರ, ಸಂಗಪ್ಪ ಕಾಂಬಳೆ, ಲಕ್ಷಿö್ಮÃ ಮುಂಡಾಸ, ಸೋಮು ರಾಠೋಡ್, ತುಳಸಿರಾಮ, ಎಂ.ಪಿ ದೊಡ್ಡಮನಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಸಿಬ್ಬಂದಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!