ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ – ಪ್ರೊ. ಪ್ರಭುರಾಜ್ ನಾಯಕ
ಅಳವಂಡಿ: ಅಳವಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆಯ ಕೋಶದಡಿಯಲ್ಲಿ ಮೊದಲ ವರ್ಷದ ಬಿ.ಎ ಮತ್ತು ಬಿ.ಕಾಮ್ ಪದವಿ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವನ್ನು ನಡೆಯಿತು.
ಈ ವೇಳೆ ಮಂಗಳೂರು ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಪ್ರಭುರಾಜ್ ನಾಯಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನಿರಂತರ ಅಭ್ಯಾಸದಿಂದ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಅಲ್ಲದೆ ಗುಣಮಟ್ಟದ ಬದುಕು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಹಾಗಾಗಿ ಮುಂದೆ ಗುರಿ ಇಟ್ಟುಕೊಂಡು ನಿರಂತರ ಅಭ್ಯಾಸ ಮಾಡಿದಾಗ ಒಂದಲ್ಲ ಒಂದು ದಿನ ನೀವು ಅಂದುಕೊಂಡ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಹಾಗಾಗಿ ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಸನ್ನಡತೆಯನ್ನು ರೂಢಿಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲರಾದ ಪ್ರೊ ಗವಿಸಿದ್ದಪ್ಪ ರವರು ಮಾತನಾಡಿ, ಪ್ರಪಂಚದಲ್ಲಿಯೇ ಉನ್ನತ ಶಿಕ್ಷಣದಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಕಡ್ಡಾಯ ಶಿಕ್ಷಣದಿಂದ ಎಲ್ಲಾರೂ ಶಿಕ್ಷಣ ಪಡೆಯುತ್ತಿದ್ದಾರೆ, ಇದಕ್ಕೆ ನಾವು ಸಂವಿಧಾನಕ್ಕೆ ಋಣಿಯಾಗಿರಬೇಕು. ಇಷ್ಟೆಲ್ಲಾ ಅವಕಾಶಗಳಿದ್ದರೂ ಪ್ರಪಂಚದ ವಿಶ್ವವಿದ್ಯಾಲಯದ ಪಟ್ಟಿಯಲ್ಲಿ ಭಾರತದ ಒಂದು ವಿಶ್ವವಿದ್ಯಾಲಯವು ಇಲ್ಲದಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಕುರಿತು ಮಾತನಾಡಿ, ಕಾಲೇಜಿನ ಶಿಸ್ತು ಮತ್ತು ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬೇಕು ಹಾಗೂ ಉತ್ತಮ ಸ್ಥಾನಕ್ಕೆ ಹೋಗಬೇಕು ಎಂದು ಆಶಿಸಿದರು.
ಇಂಗ್ಲೀಷ್ ವಿಭಾಗ ಮುಖ್ಯಸ್ಥರಾದ ಪ್ರೋ. ಮಲ್ಲಿಕಾರ್ಜುನ್ ರವರು ಪಿಪಿಟಿ ಯ ಮೂಲಕ ಕಾಲೇಜಿನ ಸಂಪೂರ್ಣ ವಿವರವನ್ನು ವಿಧ್ಯಾರ್ಥಿಗಳಿಗೆ ನೀಡಿದರು, ಐ.ಕ್ಯೂ.ಎ.ಸಿ. ಸಂಚಾಲಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಇಮಾಮ್ ಸಾಬ್ ರವರು ಪ್ರಸ್ತಾವಿಕವಾಗಿ ಮಾತನಾಡಿದರು, ಈ ಸಂಧರ್ಭದಲ್ಲಿ ಬೋಧಕ ಬೋಧೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
Comments are closed.