ಬಾಲ ಕಾರ್ಮಿಕರನ್ನು ರಕ್ಷಿಸಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕು: ತಹಶೀಲ್ದಾರ ವಿಠ್ಠಲ್ ಚೌಗಲಾ

Get real time updates directly on you device, subscribe now.

: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಹೇಳಿದರು.
ಬುಧವಾರದಂದು ನಗರದ ತಹಶೀಲ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಯೋಜನೆಯ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ  PAN-INDIA Rescue & Rehabilitation Campaign of Child and Adolescent Labour     ರಕ್ಷಣಾ ಕಾರ್ಯಾಚರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದ್ದು, ತಂಡದ ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕಂಡು ಬಂದ ಬಾಲಕಾರ್ಮಿಕ/ಕಿಶೋರ ಕಾರ್ಮಿಕ ಮಕ್ಕಳ ದಾಖಲೆಗಳನ್ನು ಪಡೆದುಕೊಂಡು ಪರಿಶೀಲಿಸಿ, ಸಮೀಪದ ಶಾಲೆಗಳಿಗೆ ದಾಖಲಿಸುವುದರ ಮೂಲಕ ಮುಖ್ಯ ವಾಹಿನಿಗೆ ತರಬೇಕು. ಹಾಗೂ ಪುನರ್ವಸತಿ ಅವಶ್ಯಕತೆ ಇರುವ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸುವುದರ ಮೂಲಕ ಪುನರ್ವಸತಿ ಕಲ್ಪಿಸಬೇಕು.  ಕಾರ್ಯಾಚರಣೆಗೆ ಸಂಬAಧಪಟ್ಟ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಇಲಾಖೆಯ ಕೆಲಸದ ಜೊತೆಗೆ ಬಾಲಕಾರ್ಮಿಕರನ್ನು ಗುರುತಿಸುವ ಕೆಲಸ ಕೂಡಾ ಎಲ್ಲಾ ಅಧಿಕಾರಿಗಳ ಜವಾಬ್ದಾರಿಯಾಗಿದೆ. 14 ವರ್ಷದೊಳಗಿನ ಯಾವುದೇ ಮಕ್ಕಳು ಯಾವುದೇ ವೃತ್ತಿಯಲ್ಲಿ ಕೆಲಸ ನಿರ್ವಹಿಸುವುದು ಮತ್ತು 14 ರಿಂದ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ವೃತ್ತಿಯಲ್ಲಿ ಮತ್ತು ಪ್ರಕ್ರಿಯೆಗಳಲ್ಲಿ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ನಿರಂತರ ಬಾಲಕಾರ್ಮಿಕರ ತಪಾಸಣೆ ನಡೆಸಿ ತಾಲೂಕು ಆಡಳಿತಕ್ಕೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ನಗರಸಭೆ ಆಯುಕ್ತರಾದ ಗಣಪತಿ ಪಾಟೀಲ್, ಕಾರ್ಮಿಕ ನಿರೀಕ್ಷಕರಾದ ಶಿವಶಂಕರ್ ತಳವಾರ, ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಜಯಶ್ರೀ ಆರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಾಹೇಖಾ ಅಹ್ಮದಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯ ನಂತರ ಕೊಪ್ಪಳ ನಗರದ ವಿವಿಧ ವಾಣಿಜ್ಯ ಸಂಸ್ಥೆಗಳನ್ನು ಪರಿಶೀಲಿಸಿದಾಗ ಪಾರಿಜಾತ ಹೋಟೆಲ್, ವಿ.ಎ ಹೈಪರ್ ಮಾರ್ಟ್, ಪವಾರ ಫ್ಯಾಶನ್, ತಾಲೂಕು ಕ್ರೀಡಾಂಗಣ ಎದುರಿಗಿನ ಓಂಕಾರ ಹೋಟೆಲ್‌ಗಳಲ್ಲಿ 14 ವರ್ಷ ಮೇಲ್ಪಟ್ಟ ಕಿಶೋರ ಕಾರ್ಮಿಕರು ಪತ್ತೆಯಾಗಿದ್ದು ಎಲ್ಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ  ಹಾಜರುಪಡಿಸಿ ಎಲ್ಲಾ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Get real time updates directly on you device, subscribe now.

Comments are closed.

error: Content is protected !!
%d bloggers like this: