ಪ್ರತಿ ರಾಜ್ಯ ಅಭಿವೃದ್ಧಿಯಾಗಬೇಕಾದರೆ ಮೂಲಭೂತ ಸೌಕರ್ಯಗಳು ಉತ್ತಮವಾಗಿ ದೊರೆಯಬೇಕು: ಜಿಲ್ಲಾಧಿಕಾರಿ ನಲಿನ್ ಅತುಲ್

Get real time updates directly on you device, subscribe now.

 ): ಪ್ರತಿ ರಾಜ್ಯ ಅಭಿವೃದ್ಧಿಯಾಗಬೇಕಾದರೆ ಮುಖ್ಯವಾಗಿ ಆರೋಗ್ಯ, ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳು ಉತ್ತಮವಾಗಿ ದೊರೆಯಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ, ಪದವಿ ಪೂರ್ವ ಕಾಲೇಜು, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದ ಬಗ್ಗೆ ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ರಾಜ್ಯ ಅಭಿವೃದ್ಧಿಯಾಗಬೇಕಾದರೆ ಮುಖ್ಯವಾಗಿ ಆರೋಗ್ಯ, ಶಿಕ್ಷಣ ಹಾಗೂ ಮೂಲಭೂತ ಸೌಲಭ್ಯಗಳು ಉತ್ತಮವಾಗಿ ದೊರೆಯಬೇಕು. ಐ.ಸಿ.ಎಂ.ಆರ್ ಸಮೀಕ್ಷೆ ಪ್ರಕಾರ ಹದಿ-ಹರೆಯದವರಲ್ಲಿ ರಕ್ತ ಹೀನತೆ ಪ್ರಮಾಣ ಹೆಚ್ಚು ಕಂಡುಬAದಿರುತ್ತದೆ. ಇದಕ್ಕೆ ಪೌಷ್ಠಿಕ ಆಹಾರ ಸೇವನೆ ಮಾಡದಿರುವುದು, ಮೂಢ ನಂಬಿಕೆ, ಮಾಹಿತಿ ಕೊರತೆ ಮುಖ್ಯ ಕಾರಣವಾಗಿದೆ. ಅನೀಮಿಯಾ ಹದಿ-ಹರೆಯದವರಲ್ಲಿ, ಗರ್ಭಿಣಿಯರಲ್ಲಿ, 5 ವರ್ಷದೊಳಗಿನ ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ದುಷ್ಪÀರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಇಂದು ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಮಾಡಲು ಸರ್ಕಾರ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಪೌಷ್ಠಿಕ ಆಹಾರ ಸೇವಿಸಿ ರಕ್ತಹೀನತೆ (ಅನೀಮಿಯಾ) ತಡೆಗಟ್ಟಿ ಜೊತೆಗೆ WIಈS ಕಾರ್ಯಕ್ರಮದಡಿಯಲ್ಲಿ ಪ್ರತಿ ಸೋಮವಾರ ನೀಡುವ ಕಬ್ಬಿಣಾಂಶ ಮಾತ್ರೆಯನ್ನು ತೆಗೆದುಕೊಳ್ಳಬೇಕು. ಇದರ ಜೊತೆಗೆ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಶೌಚಾಲಯ ಬಳಸಬೇಕು ಹಾಗೂ ರಕ್ತಹೀನತೆಯ ಬಗ್ಗೆ ಆರೋಗ್ಯ ಇಲಾಖೆ ತಂಡಗಳು ತಮ್ಮ ಕಾಲೇಜಿಗೆ ಬಂದಾಗ ಪರೀಕ್ಷಿಸಿಕೊಂಡು, ಚಿಕಿತ್ಸೆ ಪಡೆದುಕೊಳ್ಳಬೇಕು. ಯಾರೂ ನಿರ್ಲಕ್ಷö್ಯ ಮಾಡಬಾರದು. ಆರೋಗ್ಯ ಇಲಾಖೆ ಹಮ್ಮಿಕೊಂಡ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಮಹತ್ವದ ಕಾರ್ಯಕ್ರಮವಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಲಿಂಗರಾಜು ಟಿ. ಅವರು ಮಾತನಾಡಿ, ಹದಿ-ಹರೆಯದ ಹೆಣ್ಣು ಮಕ್ಕಳು ಈ ದೇಶದ ಸಂಪತ್ತು. ಇವರ ಆರೋಗ್ಯ ಕಾಪಾಡುವುದು ಇಲಾಖೆಗಳ ಮತ್ತು ಪಾಲಕರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಾದ್ಯಂತ ಇಂದು ಎಲ್ಲಾ ವಸತಿ ನಿಲಯ ಹಾಗೂ ಶಾಲಾ ಕಾಲೇಜುಗಳಲ್ಲಿ ಅನೀಮಿಯಾ ಬಗ್ಗೆ ಅರಿವು ಮೂಡಿಸಿ, ಪರೀಕ್ಷಿಸಿ, ಚಿಕಿತ್ಸೆ ನೀಡಲಾಗುತ್ತದೆ. ಪ್ರತಿ 06 ತಿಂಗಳಿಗೊಮ್ಮೆ ಜಂತು ನಿವಾರಣಾ ಮಾತ್ರೆ ನೀಡಲಾಗುತ್ತದೆ. ಇದರ ಜೊತೆಗೆ ಪ್ರತಿ ಸೋಮವಾರ ನೀಡುವ ಕಬ್ಬಿಣಾಂಶ ಮಾತ್ರೆಯನ್ನು ತಾವು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಋತುಮಾನಕ್ಕೆ ತಕ್ಕಂತೆ ಹಣ್ಣು-ಹಂಪಲು, ಮೊಳಕೆ ಬರಿಸಿದ ಕಾಳು, ಹಾಲು, ಹಸಿರು ತರಕಾರಿ, ಶೇಂಗಾಚಿಕ್ಕಿ ಸೇವಿಸಬೇಕು. ಕಡ್ಡಾಯವಾಗಿ ಪಾದರಕ್ಷೆ ಬಳಸಿ, ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಹರಿಸಿ, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇದು ಒಂದು ಮಹತ್ವದ ಕಾರ್ಯಕ್ರಮವಾಗಿದ್ದು, ಪ್ರತಿಯೊಬ್ಬರೂ ತಿಳಿದುಕೊಂಡು ಇತರರಿಗೆ ತಿಳಿಸಬೇಕು. ಅನೀಮಿಯಾ ಮುಕ್ತ ಪೌಷ್ಠಿಕ ಕೊಪ್ಪಳ ಜಿಲ್ಲೆಯನ್ನಾಗಿ ಮಾಡಲು, ಸಹಕರಿಸುವಂತೆ ತಿಳಿಸಿದರು.
ನಂತರ ಎಲ್ಲಾ ವಿದ್ಯಾರ್ಥಿಗಳ ರಕ್ತದ ಪ್ರಮಾಣ ಪರೀಕ್ಷೆ ಮಾಡಿ, ಮಾತ್ರೆ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ||ಪ್ರಕಾಶ ವಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ||ನಂದಕುಮಾರ, ಜಿಲ್ಲಾ ಕು.ರೋ.ನಿ.ಅಧಿಕಾರಿಗಳಾದ ಡಾ||ಪ್ರಕಾಶ ಹೆಚ್, ಜಿಲ್ಲಾ ರೋ.ಆ.ರೋ.ನಿ. ಅಧಿಕಾರಿಗಳಾದ ಡಾ||ವೆಂಕಟೇಶ, ತಾಲೂಕ ಅರೋಗ್ಯಾಧಿಕಾರಿಗಳಾದ ಡಾ||ರಾಮಾಂಜನೇಯ, ಪ್ರಾಂಶುಪಾಲರಾದ ವಿಜಯಕುಮಾರಗೌಡ, ಡಾ||ಪ್ರಶಾಂತ, ಜಿಲ್ಲಾಮಟ್ಟದ ಅಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರ್.ಬಿ.ಎಸ್.ಕೆ ತಂಡದ ವೈದ್ಯರು ಮತ್ತು ಸಿಬ್ಬಂದಿಗಳು, ಆರ್.ಕೆ.ಎಸ್.ಕೆ ಕಾರ್ಯಕ್ರಮದ ಆಪ್ತ ಸಮಾಲೋಚಕರು, ಆಶಾ ಕಾರ್ಯಕರ್ತೆಯರು ಮತ್ತು ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!