ನ.24ರಿಂದ ಡಿ.8ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಜ್ಯೋತಿ ರಥಯಾತ್ರೆ ಸಂಚಾರ: ನಲಿನ್ ಅತುಲ್

Get real time updates directly on you device, subscribe now.

ಕರ್ನಾಟಕ ಸಂಭ್ರಮ 50ರ ಹಿನ್ನೆಲೆ

ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆಯು ನವೆಂಬರ್ 24 ರಿಂದ ಡಿಸೆಂಬರ್ 8ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಜ್ಯೋತಿ ರಥ ಯಾತ್ರೆಯು ಸಿರಗುಪ್ಪದಿಂದ ಕಂಪ್ಲಿ ಮಾರ್ಗವಾಗಿ ಗಂಗಾವತಿಗೆ ನವೆಂಬರ್ 24ರಂದು ಆಗಮಿಸಲಿದೆ. ರಥವನ್ನು ಗಂಗಾವತಿ ತಾಲ್ಲೂಕಿನ ಗಡಿಯಲ್ಲಿ ಸ್ವಾಗತಿಸಲಾಗುತ್ತದೆ. ಗಂಗಾವತಿಯಲ್ಲಿ ಅಂದು ಸಂಜೆ 4 ಗಂಟೆಗೆ ಸ್ಥಳಿಯ ಶಾಸಕರು, ಎಲ್ಲಾ ಜನಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರುಗಳು, ಕನ್ನಡ ಪರ ಸಂಘಟನೆಗಳು, ಸ್ವಾತಂತ್ರö್ಯ ಹೋರಾಟಗಾರರು, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿ ಸಿಬ್ಬಂದಿ, ಸಾರ್ವಜನಿಕರು ಪ್ರೌಢಶಾಲೆ ಕಾಲೇಜು ವಿದ್ಯಾರ್ಥಿಗಳಿಂದ ಅದ್ದೂರಿ ಸ್ವಾಗತ, ಪೂಜೆ, ಪುಷ್ಪಾರ್ಚನೆ ನಡೆಯಲಿದೆ. ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ನಂತರ ಗಂಗಾವತಿ ತಾಲ್ಲೂಕಿನ ಗಡಿ ಭಾಗದವರೆಗೆ ಮಾರ್ಗ ಮಧ್ಯೆದಲ್ಲಿ ಬರುವ ಎಲ್ಲಾ ಹೋಬಳಿ ಹಾಗೂ ಗ್ರಾಮ ಪಂಚಾಯತಗಳಲ್ಲಿ ಗೌರವಯುತವಾಗಿ ಬರಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಹಾಗೂ ಗಂಗಾವತಿ ತಾಲ್ಲೂಕಿನ ಗಡಿಭಾಗದ ಮುಕ್ತಾಯದವರೆಗೂ ಸಂಚರಿಸಿ ಬಳಿಕ ಕೊಪ್ಪಳ ತಾಲ್ಲೂಕಿಗೆ ಹೊರಡಲಿದೆ ಎಂದು ಅವರು ತಿಳಿಸಿದ್ದಾರೆ.
ನವೆಂಬರ್ 26ರಂದು ಕೊಪ್ಪಳ ತಾಲೂಕಿಗೆ ಆಗಮನ: ಜ್ಯೋತಿ ರಥಯಾತ್ರೆಯು ನವೆಂಬರ್ 26 ರಂದು ಬೆಳಿಗ್ಗೆ 9ಕ್ಕೆ ಬೂದಗುಂಪಾ ಮಾರ್ಗವಾಗಿ ಕೊಪ್ಪಳಕ್ಕೆ ಬರಲಿದೆ. ಕೊಪ್ಪಳ ತಾಲ್ಲೂಕಿನಲ್ಲಿ ಸಹ ಅಂದು ಸಂಜೆ 4 ಗಂಟೆಗೆ ಸ್ಥಳೀಯ ಶಾಸಕರು, ಎಲ್ಲಾ ಜನಪ್ರತಿನಿಧಿಗಳು, ಸ್ವಾತಂತ್ರö್ಯ ಹೋರಾಟಗಾರರು ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಸ್ವಾಗತ ಸಮಾರಂಭ ನಡೆಯಲಿದೆ. ಜಿಲ್ಲೆಯ ಸಾಹಿತಿಗಳು, ಕಲಾವಿದರುಗಳು, ಕನ್ನಡ ಪರ ಸಂಘಟನೆಗಳ ಪ್ರಮುಖರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಅದ್ದೂರಿ ಸ್ವಾಗತ, ಪೂಜೆ, ಪುಷ್ಪಾರ್ಚನೆ ಬಳಿಕ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯ ಹಾಜರಿರಬೇಕು ಎಂದು ಸೂಚನೆ ನೀಡಿದ್ದಾರೆ. ಕೊಪ್ಪಳ ತಾಲೂಕಿನ ಕಾರ್ಯಕ್ರಮದ ಜವಾಬ್ದಾರಿಯನ್ನು ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕೊಪ್ಪಳ ನಗರಸಭೆ ಪೌರಾಯುಕ್ತರು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಹಾಗೂ ಸಂಬAಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ವಹಿಸಲಾಗಿದ್ದು, ಜ್ಯೋತಿ ರಥ ಸಂಚಾರ ಕಾರ್ಯಕ್ರಮಕ್ಕೆ ಎಲ್ಲ ಜನಪ್ರತಿನಿಧಿಗಳಿಗೆ ಮತ್ತು ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳು, ಮಾಧ್ಯಮದವರಿಗೆ ತಿಳಿಸಬೇಕು. ಪೊಲೀಸ್ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ಕೊಪ್ಪಳ ತಾಲ್ಲೂಕಿನ ಗಡಿ ಭಾಗದವರೆಗೆ ಮಾರ್ಗ ಮಧ್ಯೆದಲ್ಲಿ ಬರುವ ಎಲ್ಲಾ ಹೋಬಳಿ ಹಾಗೂ ಗ್ರಾಪಂ ಗಳಲ್ಲಿ ಗೌರವಯುತವಾಗಿ ಬರಮಾಡಿಕೊಳ್ಳುವ ವ್ಯವಸ್ಥೆ ಮಾಡಬೇಕು. ಕೊಪ್ಪಳ ತಾಲ್ಲೂಕಿನ ಗಡಿಭಾಗದ ಮುಕ್ತಾಯದವರೆಗೂ ಸಂಚರಿಸಿ ಕುಕನೂರು ತಾಲ್ಲೂಕಿಗೆ ಬೀಳ್ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆ: ಪ್ರತಿ ತಾಲ್ಲೂಕಿನಲ್ಲಿ ಕನ್ನಡ ಜ್ಯೋತಿ ಯಾತ್ರೆ ರಥವು ಎರಡು ದಿನಗಳ ಕಾಲ ಇರುವುದರಿಂದ ಸಂಬAಧಿಸಿದ ತಾಲ್ಲೂಕಿನ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ರಥಯಾತ್ರೆಯು ಸಂಚರಿಸುವ ಮಾರ್ಗವನ್ನು 2 ದಿನಕ್ಕೆ ನಿಗದಿಪಡಿಸಬೇಕು. ಸಂಚರಿಸುವ ಮಾರ್ಗದಲ್ಲಿ ಬರುವ ಪಟ್ಟಣ ಹಳ್ಳಿಗಳಲ್ಲಿ ಸ್ವಾಗತ, ಪೂಜೆ, ಪುಷ್ಪಾರ್ಚನೆ ಮೆರವಣಿಗೆ ಮಾಡಿಸಬೇಕು. ಮರುದಿನ ಬೆಳಿಗ್ಗೆ ತಾಲ್ಲೂಕಿನ ಗಡಿಭಾಗದವರೆಗೆ ರಥ ಬೀಳ್ಕೊಡಬೇಕು. ರಥವನ್ನು ತಾಲ್ಲೂಕು ಆಡಳಿತದಿಂದ ತಾಲ್ಲೂಕಿನ ಪ್ರಾರಂಭದ ಗಡಿಭಾಗದಿಂದ ಸ್ವಾಗತಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕರಲ್ಲಿ ಮನವಿ: ಮೈಸೂರು ರಾಜ್ಯವು ಕರ್ನಾಟಕ ಎಂದು ನಾಮಕರಣವಾಗಿ 01ನೇ ನವಂಬರ್ 2023ಕ್ಕೆ 50 ವರ್ಷ ಪೂರ್ಣಗೊಂಡಿರುವ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬAಧಿಸಿದAತೆ ಮತ್ತು ಯುವ ಜನತೆಯಲ್ಲಿ ಕನ್ನಡ – ಕನ್ನಡಿಗ – ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು 2023-24ನೇ ಸಾಲಿನ ಅಯವ್ಯಯದಲ್ಲಿ ಘೋಷಣೆ ಮಾಡಿದ್ದರು. ಇದರನ್ವಯ ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆಯು ಕರ್ನಾಟಕ ರಾಜ್ಯಾದ್ಯಾಂತ ಸಂಚರಿಸುತ್ತಿದೆ. ಅದರಂತೆ ನವೆಂವರ್ 24 ರಿಂದ ಡಿಸೆಂಬರ್ 08ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ರಥಯಾತ್ರೆ ಸಂಚರಿಸಲಿದೆ. ಮೊದಲಿಗೆ ಗಂಗಾವತಿ ತಾಲೂಕಿನಲ್ಲಿ ಬಳಿಕ ಕೊಪ್ಪಳ, ಆನಂತರ ಕುಕನೂರ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ ತಾಲೂಕುಗಳಲ್ಲಿ ಸಂಚರಿಸಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!