ಕೊಪ್ಪಳ ವಿವಿಗೆ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಸೂಚನೆ
2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೊಪ್ಪಳ ವಿಶ್ವವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪಡೆದ ಅಭ್ಯರ್ಥಿಗಳು ಯುಯುಸಿಎಂಎಸ್ ಮುಖಾಂತರ ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಡಕಗಳೊಂದಿಗೆ ಅದರ ಸಂಪೂರ್ಣ ಒಂದು ಪ್ರತಿಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು (ಪ್ರಭಾರ), ಕೊಪ್ಪಳ ವಿಶ್ವವಿದ್ಯಾಲಯ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್-583231 ಈ ಕಚೇರಿಗೆ ನವೆಂಬರ್ 27ರ ಸಂಜೆ 5.30ರೊಳಗೆ ಕಡ್ಡಾಯವಾಗಿ ಸಲ್ಲಿಸಲು ಸೂಚಿಸಲಾಗಿದೆ. ತಲುಪಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.