ಮತದಾರರ ಪಟ್ಟಿ ವೀಕ್ಷಕರಾದ ಕೆ.ಪಿ.ಮೋಹನರಾಜ್ ಡಿಸೆಂಬರ್ 2ರಂದು ಕೊಪ್ಪಳ ಜಿಲ್ಲೆಗೆ ಭೇಟಿ

Get real time updates directly on you device, subscribe now.

ಸರ್ಕಾರದ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿ ವೀಕ್ಷಕರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಡಿಸೆಂಬರ್ 02ರಂದು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಡಿಸೆಂಬರ್ 02 ಮತ್ತು ಡಿಸೆಂಬರ್ 03ರಂದು ಭಾರತ ಚುನಾವಣಾ ಆಯೋಗವು ಆಯೋಜಿಸಿರುವ ವಿಶೇಷ ಅಭಿಯಾನ ಕಾರ್ಯಕ್ರಮದ ಪರಿಶೀಲನೆಗಾಗಿ ಅವರು ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲಿದ್ದು, ಮತದಾರರ ಪಟ್ಟಿ ವಿಶೇಷ ಅಭಿಯಾನ ಕಾರ್ಯಕ್ರಮದ ಬಗ್ಗೆ ತಿಳಿಯಲು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ಮತದಾರರ ಪಟ್ಟಿ ವೀಕ್ಷಕರಾದ ಕೆ.ಪಿ.ಮೋಹನರಾಜ್ ಅವರು ಡಿಸೆಂಬರ್ 2ರಂದು ಕೊಪ್ಪಳ ಜಿಲ್ಲೆಯಲ್ಲಿ ಲಭ್ಯವಿರಲಿದ್ದಾರೆ. ಆದ್ದರಿಂದ ಸಾರ್ವಜನಿಕರು, ಮತದಾರರ ಪಟ್ಟಿಗೆ ಸಂಬAಧಿಸಿದAತೆ ಯಾವುದೇ ಕುಂದು ಕೊರತೆಗಳು, ಅಹವಾಲುಗಳಿದ್ದಲ್ಲಿ ಮಾನ್ಯರ ಮೊಬೈಲ್ ಸಂಖ್ಯೆ:9449530000 ಗೆ ಕರೆ ಮಾಡಿ ಮಾತನಾಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!