ಸಚಿವ ಎಚ್.ಸಿ.ಮಹಾದೇವಪ್ಪನವರಿಗೆ ಸನ್ಮಾನ
ಕೊಪ್ಪಳ : ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಗೆ ತೆರಳುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪನವರಿಗೆ ಕೊಪ್ಪಳದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ರಾಜ್ಯ ಛಲುವಾದಿ ಮಹಾಸಭಾದ ರಾಜ್ಯ ಉಪಾದ್ಯಕ್ಷರು ಹಾಗೂ ಕೊಪ್ಪಳ ಡಿಸಿಸಿ ಪ್ರದಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿಯವರ ಪೆಟ್ರೋಲ್ ಬಂಕ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆತೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯೆ ಶ್ರೀಮತಿ ಸರಸ್ವತಿ ಕೃಷ್ಣ ಇಟ್ಟಂಗಿ, ಅಂಬೇಡ್ಕರ್ ಸಮಗ್ರ ಅಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರು ಇಟ್ಟಂಗಿ, ವೆಂಕಟೇಶ ಇಟ್ಟಂಗಿ, ದೇವೆಂದ್ರ ಇಟ್ಟಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.