ಡಿ.10 ರಂದು ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ
2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-454 ಹುದ್ದೆಗಳ ನೇಮಕಾತಿ ಸಂಬAಧ ಅಭ್ಯರ್ಥಿಗಳಿಗೆ ಡಿ.10 ರಂದು ಕೊಪ್ಪಳ ನಗರ ಹಾಗೂ ಭಾಗ್ಯನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಲಿಖಿತ ಪರೀಕ್ಷೆಯು ಜರುಗಲಿದ್ದು, ಇದರ ಅಂಗವಾಗಿ ಅಂದು ಬೆಳಿಗ್ಗೆ 11 ಗಂಟೆಯಿAದ 12.30 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 100 ಮೀ. ಅಂತರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ.
ನಗರದ ಕಾಳಿದಾಸ ಪ್ರೌಢಶಾಲೆ, ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನ್ಯಾಷನಲ್ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ, ನ್ಯೂ ಎಕ್ಸ್ಲೆಂಟ್ ಪಬ್ಲಿಕ್ ಶಾಲೆ, ನಿವೇದಿತಾ ಪ್ರೆöÊಮರಿ ಮತ್ತು ಪ್ರೌಢಶಾಲೆ, ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜು, ಶ್ರೀ ಗವಿಸಿದ್ದೇಶ್ವರ ಕಾಂಪೋಸಿಟ್ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ 2360 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.