ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಗೌರವ ಖಂಡಿಸಿ ಹೋರಾಟದ ಎಚ್ಚರಿಕೆ
Koppal ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಅಹ್ವಾನಿಸಿ ಸಭೆ ನಡೆಯುವಾಗ ಅಗೌರವ ತೋರಿಸಿದ್ದನ್ನು ಖಂಡಿಸಿ ಸಂಘದ ಸದಸ್ಯರು ಉಪನಿರ್ದೆಶಕರಿಗೆ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ . ಸಭೆಗೆ ಆಹ್ವಾನಿಸಲು ಸರಕಾರದ ಆದೇಶವಿದ್ದರೂ ಸಹಿತ ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದನ್ನು ಖಂಡಿಸಿ ಮುಂದಿನ ಹೋರಾಟವನ್ನು ರೂಪಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶದ ಸುಧಾರಣೆಗೆ ಖಾಸಗಿ, ಅನುದಾನ ಮತ್ತು ಅನುದಾನ ರಹಿತ , ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೋಮವಾರ ಕಾರ್ಯಾಗಾರ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಅಗೌರವ ತೋರಲಾಗಿದೆ. ಅವರನ್ನು ವೇದಿಕೆ ಮೇಲೆ ಕರೆದಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಆದ್ದರಿಂದ ಈ ಸಂಘದ ಜಿಲ್ಲಾಧ್ಯಕ್ಷ ಸೋಮಪ್ಪ ಹರ್ತಿ, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಜಾಕೀರಹುಸೇನ್ ಕುಕನೂರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ ಡಿಡಿಪಿಐಯವರಿಗೆ ಖಂಡನಾ ನಿರ್ಣಯದ ಮನವಿ ಸಲ್ಲಿಸಿದ್ದಾರೆ.” ಕಾರ್ಯಾಗಾರಕ್ಕೆ ಆಹ್ವಾನಿಸಿ ನಿರೂಪಣೆ ಮಾಡಿದ ಬಾಬುಸಾಬ ಉದ್ದೇಶಪೂರ್ವಕವಾಗಿ ಪದಾಧಿಕಾರಿಗಳನ್ನು ಸ್ವಾಗತಿಸಿಲ್ಲ. ಇದು ಸರಿಯಲ್ಲ” ಅವಮಾನಿಸಿದ್ದನ್ನು ಸಂಘವು ಖಂಡಿಸಿದೆ
Comments are closed.