ವಸತಿ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ತರಬೇತಿ ಕಾರ್ಯಕ್ರಮ

Get real time updates directly on you device, subscribe now.

  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಮಕ್ಕಳ ಸಂರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಜಿಲ್ಲೆಯಲ್ಲಿರು ವಸತಿ ಶಾಲೆಗಳ ಮುಖ್ಯೋಪಾಧ್ಯಾಯರಿಗೆ/ಪ್ರಾಂಶುಪಾಲರಿಗೆ  ತರಬೇತುದಾರರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು, ಮಕ್ಕಳ ರಕ್ಷಣೆ ಎಂದರೆ ಮಗು ಯಾವುದೇ ವ್ಯಕ್ತಿ, ಸಂಸ್ಥೆ, ವ್ಯವಸ್ಥೆ ಅಥವಾ ಪ್ರಾಧಿಕಾರದ ಪೋಷಣೆಯಲ್ಲಿರುವಾಗ ನಿರ್ಲಕ್ಷö್ಯ, ತಾರತಮ್ಯ, ಹಿಂಸೆ (ಮೌಖಿಕ ಮತ್ತು ದೈಹಿಕ), ನಿಂದನೆ (ಮಾನಸಿಕ ಮತ್ತು ದೈಹಿಕ), ಆರ್ಥಿಕ ಮತ್ತು ಲೈಂಗಿಕ ಶೋಷಣೆಗೆ ಒಳಗಾಗದಂತೆ ರಕ್ಷಿಸುವುದು ಮತ್ತು ಪ್ರತಿ ಮಗುವಿನ ಮೂಲಭೂತ ಹಕ್ಕುಗಳ ರಕ್ಷಣೆಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಯು ಅಂತರಾಷ್ಟಿçÃಯ ಮಕ್ಕಳ ಹಕ್ಕುಗಳ ಒಡಂಬಡಿಕೆ 1989 (Uಓಅಖಅ), ಭಾರತ ಸಂವಿಧಾನ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನೇಕ ಕಾಯಿದೆಗಳು ಮತ್ತು ರಾಷ್ಟಿçÃಯ ಮಕ್ಕಳ ನೀತಿ 2013ರ ಅಂಶಗಳನ್ನು ಒಳಗೊಂಡಿದೆ. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಯು ಶಾಸನಾತ್ಮಕವಾಗಿ ರೂಪಿಸಲಾದ ಮಕ್ಕಳ ಹಕ್ಕುಗಳು, ಮಗುವು ವಾಸಿಸುವ ಸ್ಥಳ/ವಾತಾವರಣವು ರಕ್ಷಣಾತ್ಮಕವಾಗಿರುವುದಾಗಿಯೂ ಮತ್ತು ಮಗುವು ನಿರ್ಲಕ್ಷö್ಯ, ತಾರತಮ್ಯ, ಹಿಂಸೆ, ನಿಂದನೆ, ಆರ್ಥಿಕ ಮತ್ತು ಲೈಂಗಿಕ ಶೋಷಣೆಗಳಿಂದ ಸುರಕ್ಷಿತವಾಗಿರುವುದರ ಬಗ್ಗೆ ಸರ್ಕಾರದ ಬದ್ಧತೆಯನ್ನು ಖಾತರಿಪಡಿಸುವುದಲ್ಲದೆ, ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ತಡೆಯಲು ಉತ್ತಮ ವಾತಾವರಣ ನಿರ್ಮಾಣಕ್ಕಾಗಿ ಸರ್ಕಾರವು ಮುಂಜಾಗ್ರತೆ ಮತ್ತು ಪ್ರತಿಕ್ರಿಯಾತ್ಮಕ ವ್ಯವಸ್ಥೆಯನ್ನು ಹೊಂದಬೇಕಾಗಿದೆ ಎಚಿದು ಹೇಳಿದರು.
ಸರ್ಕಾರವು ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ನಿಯಮಾವಳಿಗಳಿಗೆ ಬದ್ಧವಾಗಿರುವುದಾಗಿ ತಿಳಿಸಿದೆ. ಮಕ್ಕಳ ರಕ್ಷಣೆ ಮತ್ತು ರಕ್ಷಣಾತ್ಮಕ ಪರಿಸರ ನಿರ್ಮಾಣವನ್ನು ಖಾತರಿ ಪಡಿಸುವಲ್ಲಿ ನಿಯಮಾವಳಿಗಳು, ಮಕ್ಕಳಿಗಾಗಿ ಕಾರ್ಯಕ್ರಮಗಳು, ಮಕ್ಕಳ ಪೋಷಣೆಯಲ್ಲಿ ತೊಡಗಿರುವವರ ಅವಶ್ಯಕತೆಗಳನ್ನು ಸರ್ಕಾರವು ಗುರುತಿಸಿದೆ. ರಾಜ್ಯದಲ್ಲಿ ಮಕ್ಕಳ ಹಕ್ಕು ಮತ್ತು ರಕ್ಷಣಾತ್ಮಕ ಪರಿಸರವನ್ನು ಖಾತರಿ ಪಡಿಸಲು ಮಕ್ಕಳ ರಕ್ಷಣಾ ನೀತಿಯು ಮಾನದಂಡಗಳನ್ನು ರೂಪಿಸಿರುವುದಲ್ಲದೇ, ವಿವಿಧ ಭಾಗೀದಾರರುಗಳ ಪಾತ್ರ ಮತ್ತು ಜವಾಬ್ದಾರಿಗಳನ್ನು ತಿಳಿಸುತ್ತದೆ. ಆದ್ದರಿಂದ ತರಬೇತಿಯಲ್ಲಿ ತಾವುಗಳೆಲ್ಲರೂ ಸಕ್ರಿಯಾಗಿ ಭಾಗವಹಿಸಿ, ನೀತಿಯನ್ನು ಅರಿತುಕೊಂಡು ನಿಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ನೀತಿಯನ್ನು ಅಳವಡಿಸಿಕೊಳ್ಳುವುದರೊಂದಿಗೆ, ಇತರೆ ಸಂಸ್ಥೆಗಳಿಗೂ ಮಾರ್ಗದರ್ಶನವನ್ನು ನೀಡಿ, ಜಿಲ್ಲೆಯಲ್ಲಿ ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೋಟಗಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು, ಮಕ್ಕಳಿಗೆ ಲೈಂಗಿಕ ದೌರ್ಜನ್ಯ, ಹಲ್ಲೆ ಮತ್ತು ಕಿರುಕುಳ ನೀಡಿದಂತಹ ಪ್ರಕರಣಗಳು ವರದಿಯಾಗಿದ್ದು, ಕೆಲವು ಶಿಕ್ಷಕರಿಗೆ ನ್ಯಾಯಾಲಯವು ಶಿಕ್ಷೆಯನ್ನು ಸಹ ನೀಡಿದೆ. ಆದ್ದರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012 ಮತ್ತು ತಿದ್ದುಪಡಿ -2019ರ ಕುರಿತು ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಮುದಾಯದಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವ ಉದ್ದೇಶದಿಂದ ತಮ್ಮೆಲ್ಲರಿಗೂ ಕಾಯ್ದೆ ಮತ್ತು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಕುರಿತು ತರಬೇತಿಯನ್ನು ನೀಡುತ್ತಿದ್ದು, ಈ ಮಾಹಿತಿಯನ್ನು ತಾವುಗಳು ತಮ್ಮ ಶೈಕ್ಷಣಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಿ ಹಾಗೂ ವಿದ್ಯಾರ್ಥಿಗಳಿಗೆ ಜಾಗೃತಿಯನ್ನು ಮೂಡಿಸುವುದರೊಂದಿಗೆ ಸಂಸ್ಥೆಯಲ್ಲಿ ಅನುಷ್ಠಾನಗೊಳಿಸಬೇಕಾಗಿರುತ್ತದೆಂದು ವಿವರಿಸಿದರು.
ಯುನಿಸೆಫ್-ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಕೆ. ರಾಘವೇಂದ್ರ ಭಟ್ ಅವರು  ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಕುರಿತು, ಯುನಿಸೆಫ್-ಮಕ್ಕಳ ಸಂರಕ್ಷಣಾ ಯೋಜನೆಯ ವ್ಯಸ್ಥಾಪಕರಾದ ಹರೀಶ ಜೋಗಿ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012 ಮತ್ತು ತಿದ್ದುಪಡಿ- 2019ರ ಕುರಿತು ತರಬೇತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,  ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರು/ಪ್ರಾಚಾರ್ಯರು/ಮುಖ್ಯೋಪಾಧ್ಯಾಯರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಪವಾರ, ರವಿ ಬಡಿಗೇರ ಸೇರಿದಂತೆ ಇತರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!