ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವಾಗ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಸಿಇಒ ರಾಹುಲ್ ರತ್ನಂ ಪಾಂಡೇಯ
ವ್ಯಕ್ತಿಯ ಜನನ ಮತ್ತು ಮರಣ ಪ್ರಮಾಣ ಪತ್ರಗಳು ಸದ್ಯದ ಹಾಗೂ ಭವಿಷ್ಯದ ದಿನಗಳಲ್ಲಿ ಮಹತ್ವದ ದಾಖಲೆಗಳಾಗಿವೆ. ಜನನ ಪ್ರಮಾಣ ಪತ್ರ ಪಡೆಯುವುದು ಮಗುವಿನ ಮೊದಲ ಹಕ್ಕಾಗಿದೆ. ಮಗುವನ್ನು ಶಾಲೆಗೆ ಸೇರಿಸಲು, ಉದ್ಯೋಗಕ್ಕಾಗಿ, ಆಧಾರ್ ಕಾರ್ಡ್ ಪಡೆಯಲು, ವಿಮಾ ಪಾಲಿಸಿ ಪಡೆಯಲು, ಪಡಿತರ ಚೀಟಿ ಪಡೆಯಲು, ವಿವಾಹ ನೋಂದಣಿ ಮುಂತಾದ ಸಂದರ್ಭಗಳಲ್ಲಿ ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಅದರಂತೆ ವಿಮಾ ಹಣ ಪಡೆಯಲು, ಆಸ್ತಿಯ ಹಕ್ಕನ್ನು ನಿರ್ಧಾರ ಮಾಡಲು, ಪಿಂಚಣಿ ಹಕ್ಕು ಹೊಂದಲು, ಅನುಕಂಪದ ಆಧಾರದ ನೌಕರಿ,, ಅಪಘಾತ ಪರಿಹಾರ ಪಡೆಯಲು, ಮುಂತಾದ ವಿಷಯಗಳಲ್ಲಿ ಮರಣ ಪ್ರಮಾಣದ ಅಗತ್ಯ ಹಾಗೂ ಕಡ್ಡಾಯವಿರುತ್ತದೆ. ಆದ್ದರಿಂದ ಇವುಗಳನ್ನು ನೀಡುವಾಗ ಸಕ್ಷಮ ಪ್ರಾಧಿಕಾರಗಳು ಪೂರಕ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಪ್ರಮಾಣ ಪತ್ರ ನೀಡಬೇಕು. ಬೇಜವ್ದಾರಿ ತೋರದೆ, ಲೋಪದೋಷಗಳಿಲ್ಲದಂತೆ ಖಾತ್ರಿ ಪಡಿಸಿಕೊಂಡು ಪ್ರಮಾಣ ಪತ್ರ ವಿತರಿಸಬೇಕು ಎಂದು ಪಿಡಿಒಗಳಿಗೆ ಸಿಇಒ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಮಾತನಾಡಿ, ಜನನ ಮರಣ ಮೂಲ ಆಧಾರಗಳನ್ನು ಪರಿಶೀಲಿಸಿ ನೋಂದಣಿ ಪ್ರಮಾಣ ಪತ್ರವನ್ನು ನೀಡಬೇಕು. ಜವಾಬ್ದಾರಿ ವಹಿಸಿ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಫಾರಂಗಳನ್ನು ತುಂಬುವುದರ ಬಗ್ಗೆ ಹಾಗೂ ಅಗತ್ಯ ಪೂರಕ ದಾಖಲೆಗಳನ್ನು ಒದಗಿಸುವುದರ ಬಗ್ಗೆ ಮಾಹಿತಿ ನೀಡಿ, ವಿಳಂಬವಿಲ್ಲದೆ ಪ್ರಮಾಣ ಪತ್ರ ವಿತರಿಸಬೇಕು ಎಂದು ಹೇಳಿದರು.
ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಮಾತನಾಡಿ, ಜನನ, ಮರಣ ನೋಂದಣಿ ಪ್ರಮಾಣ ಪತ್ರವನ್ನು ಸಾರ್ವಜನಿಕರಿಗೆ ಕಡಿಮೆ ಅವಧಿಯಲ್ಲಿ ಕೊಡಬೇಕು. ಅವರ ಕುಟುಂಬದವರಿAದ ಜನನ ವರದಿ ಬಗ್ಗೆ ಮಾಹಿತಿ ಪಡೆದು ಜನನ ಪ್ರಮಾಣ ಪತ್ರ ನೀಡಬೇಕು. ಪ್ರಮಾಣ ಪತ್ರವನ್ನು ತಂತ್ರಾAಶದ ಮೂಲಕವೇ ಕೊಡಬೇಕು. ಪೂರಕ ದಾಖಲೆಗಳನ್ನು ಪರಿಶೀಲಿಸಿ ಅರ್ಜಿದಾರರಿಗೆ ಅಗತ್ಯ ಮಾಹಿತಿ ನೀಡಬೇಕು. ಪೋರ್ಟಲ್‌ನಲ್ಲಿ ನಿಗದಿ ಪಡಿಸಿದ ಅವಧಿಯೊಳಗೆ ಪ್ರಮಾಣ ಪತ್ರ ವಿತರಿಸಬೇಕು ಎಂದು ತಿಳಿಸಿದರು. ಬೆಂಗಳೂರಿನ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜನನ ಮರಣ ಮುಖ್ಯ ನೋಂದಣಾಧಿಕಾರಿ ಕಚೇರಿಯ ರಾಜ್ಯ ಸಮಾಲೋಚಕರಾದ ಮಧುಕುಮಾರ, ಖಜಾನೆ ಇಲಾಖೆಯ ಮುಖ್ಯ ಲೆಕ್ಕ ಅಧಿಕಾರಿ ಮಲ್ಲಪ್ಪ ಅವರು ಜನನ, ಮರಣ ನೋಂದಣಿ ಅಧಿನಿಯಮ 1969, ಅಧಿನಿಯಮ 1969ರ ಪ್ರಕರಣ 7(5), ಅಧಿನಿಯಮದ ಲಕ್ಷಣಗಳು, ಉಪಬಂಧಗಳು, ಜನನ ಮತ್ತು ಮರಣ ನೋಂದಣಿ, ಪ್ರಮಾಣ ಪತ್ರ ವಿತರಣೆ, ತಿದ್ದುಪಡಿ, ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಿದರು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಲೆಕ್ಕಾಧಿಕಾರಿ ಅಮೀನ್‌ಸಾಬ್ ಅತ್ತಾರ, ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ ಎ.ಮಾನೆ ಸೇರಿದಂತೆ ಜಿಲ್ಲೆಯ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಂಪ್ಯೂಟರ್ ಆಪರೇಟರ್‌ಗಳು ಉಪಸ್ಥಿತರಿದ್ದರು.
Comments are closed.