ಕೊಪ್ಪಳ ನಗರಸಭೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

Get real time updates directly on you device, subscribe now.

ಕೊಪ್ಪಳ ನಗರಸಭೆ ವತಿಯಿಂದ 2023-24ನೇ ಸಾಲಿನ ನಗರಸಭೆ ನಿಧಿ ಅನುದಾನದಡಿಯಲ್ಲಿ ಶೇ.5 ಯೋಜನೆ, ಶೇ.24.10 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಶೇ.7.25 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನ ಮಕ್ಕಳ ಆರೈಕೆದಾರರಿಗೆ ಸಹಾಯಧನ:
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಶೇ.5 ಯೋಜನೆಯ ನಗರಸಭೆ ನಿಧಿ ಅನುದಾನದಡಿಯಲ್ಲಿ ಶೆ.50 ರಷ್ಟು ವ್ಯಕ್ತಿಗತ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬುದ್ದಿಮಾಂದ್ಯ ಮತ್ತು ಬಹುವಿಧ ಅಂಗವಿಕಲತೆ ಸರಬಲ್ ಪಾಲ್ಸಿ ಹೊಂದಿದ ವಿಕಲಚೇತನ ಮಕ್ಕಳ ಆರೈಕೆದಾರರಿಗೆ ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕೊಪ್ಪಳ ನಗರದ ನಿವಾಸಿಯಾಗಿರತಕ್ಕದ್ದು, ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಬುದ್ದಿ ಮಾಂದ್ಯತೆ ಮತ್ತು ಬಹುವಿದ ಅಂಗವಿಕಲತೆ ಸರಬಲ್ ಪಾಲ್ಸಿ ಹೊಂದಿದ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳನ್ನು, ಬ್ಯಾಂಕ್ ಪಾಸ್‌ಬುಕ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗದ ಯೋಜನೆಗಳು:
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 2023-24ನೇ ಸಾಲಿನ  ಶೇ.24.10 ರ ಯೋಜನೆಯ ನಗರಸಭೆ ನಿಧಿ ಅನುದಾನದಡಿ ಶೇ.40 ರಷ್ಟು ವ್ಯಕ್ತಿಗತ ಪ್ರöತ್ಯೇಕ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಶೇ.7.25 ರ ಯೋಜನೆಯ ನಗರಸಭೆ ನಿಧಿ ಅನುದಾನದಡಿಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ವರ್ಗದ ಜನಾಂಗದವರಿಗೆ ಶಸ್ತç ಚಿಕಿತ್ಸೆಗಾಗಿ ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು. ಅರ್ಜಿಯೊಂದಿಗೆ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳನ್ನು, ಬ್ಯಾಂಕ್ ಪಾಸ್‌ಬುಕ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು, ಶಸ್ತç ಚಿಕಿತ್ಸೆಗಾಗಿ ಹೊಂದಿದ ಪ್ರಮಾಣ ಪತ್ರ ಹಾಗೂ ಬಿಲ್‌ಗಳನ್ನು ಲಗತ್ತಿಸಬೇಕು.
ಮೇಲ್ಕಂಡ ಎಲ್ಲ ಯೋಜನೆಗಳಡಿ ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನಾಂಕವಾಗಿದ್ದು, ಅವಧಿ ಮೀರಿ ಬಂದ ಹಾಗೂ ಅಪೂರ್ಣ ದಾಖಲಾತಿ ಹೊಂದಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!