ಸಖಿ ಒನ್ ಸ್ಟಾಪ್ ಸೆಂಟರ್ -ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ ಸಹಯೋಗದಲ್ಲಿ ಆರೋಗ್ಯ ಶಿಬಿರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇನ್ನರ್ ವ್ಹೀಲ್ ಕ್ಲಬ್, ಭಾಗ್ಯನಗರ, ಎಸ್.ಡಿ.ಮ್.ನಾರಾಯಣ ಹಾರ್ಟ್ ಕೇರ್ ಸೆಂಟರ್ ಹಾಗೂ ದೇವದಾಸಿ ಪುನರ್ವಸತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಘಟಕ, ತಂಬಾಕು ವ್ಯಸನ ಮುಕ್ತ ಕೇಂದ್ರ, ಕೊಪ್ಪಳ ಇವರ ಸಹಯೋಗದಲ್ಲಿ ಡಿ.12 ರಂದು ಭಾಗ್ಯನಗರದ ಇನ್ನರ್‌ವ್ಹೀಲ್ ಕ್ಲಬ್‌ನಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ, ಲಿಂಗತ್ವ ಅಲ್ಪಸಂಖ್ಯಾತರಿಗೆ ವೈದ್ಯಕೀಯ ತಪಾಸಣೆ ಮತ್ತು ಲಿಂಗತ್ವಧಾರಿತ ದೌರ್ಜನ್ಯ ತಡೆ ರಾಷ್ಟೀಯ ಅಭಿಯಾನ, ನಾರಿ ಚೇತನ – ಮಹಿಳಾ ಸಮನ್ವಯತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಖಿ ಘಟಕದ ಆಡಳಿತಾಧಿಕಾರಿ ಯಮುನಾ ಬೆಸ್ತರ್ ಮಾತನಾಡಿ, ಸಂಕಷ್ಟದಲ್ಲಿರುವ ಮಹಿಳೆಯರಿಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಘಟಕದಲ್ಲಿ ಆಪ್ತ ಸಮಾಲೋಚನೆ, ಮನೋಸ್ಥೆöÊರ್ಯ, ಕಾನೂನು ನೆರವು, ಪೊಲೀಸ್ ನೆರವು ಹಾಗೂ ತಾತ್ಕಾಲಿಕ ವಸತಿ ಸೌಕರ್ಯ ಮತ್ತು ಕುಟುಂಬದೊAದಿಗೆ ಸಮಾಲೋಚನೆ ಮಾಡುವುದರೊಂದಿಗೆ ಪುನರ್ವಸತಿಯನ್ನು ಕಲ್ಪಿಸುವಂತಹ ಅವಕಾಶವನ್ನು ಸಖಿ ಘಟಕದಲ್ಲಿ ಕಲ್ಪಿಸಲಾಗುತ್ತದೆಂದು ತಿಳಿಸಿದರು.
ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪೂರ್ಣಿಮಾ ಏಳುಬಾವಿ ಅವರು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಬಗ್ಗೆ ಕರ್ನಾಟಕ ರಾಜ್ಯ ಟ್ರಾನ್ಸ್ಜೆಂಡರ್ಸ್ ನೀತಿ 2017 ಅನ್ನು ಜಾರಿಗೆ ತರಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನವಾಗಲು ಲಿಂಗತ್ವ ಅಲ್ಪಸಂಖ್ಯಾತರು ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಲಿಂಗತ್ವ ಅಲ್ಪಸಂಖ್ಯಾತರು ಸಮಾಜದಲ್ಲಿ ಎದುರಿಸುತ್ತಿರುವ ಸವಾಲುಗಳಿಗೆ ಧ್ವನಿಗೊಟ್ಟು, ಅವರ ಹಕ್ಕುಗಳಿಗಾಗಿ ಹೊ ಹೇಳಿದರು.
ತಂಬಾಕು ವ್ಯಸನ ಮುಕ್ತ ಕೇಂದ್ರದ ಮನೋಶಾಸ್ತçಜ್ಞೆ ಶಾಂತಮ್ಮ ಕಟ್ಟಿಮನಿ ಮಾತನಾಡಿ, ತಂಬಾಕು ಸೇವನೆಯಿಂದ 2500 ಭಾರತೀಯರು ಪ್ರತಿ ದಿನ ಸಾಯುತ್ತಿದ್ದಾರೆ. ವಿಶ್ವದ 10 ರಲ್ಲಿ ಒಂದು ಸಾವು ತಂಬಾಕಿನಿAದ ಉಂಟಾಗುತ್ತದೆ. ಅಲ್ಲದೆ ಇತ್ತೀಚಿನ ದಿನದಲ್ಲಿ ಕ್ಯಾನ್ಸರ್, ಹೃದಯ ಸಂಬAಧಿ ಕಾಯಿಲೆಗಳು, ಶ್ವಾಸಕೋಶದ ಕಾಯಿಲೆ ಮತ್ತು ಇತರೆ ಕಾಯಿಲೆಗಳು ತಂಬಾಕು ಸೇವನೆಯಿಂದ ಬರಬಹುದಾಗಿದೆ. ಪ್ರತಿ ಸಿಗರೇಟ್/ಬೀಡಿ ಸೇವನೆ 7 ನಿಮಿಷ ಆಯಸ್ಸು ಕಡಿಮೆ ಯಾಗುತ್ತದೆ. ಪ್ರತಿ 6 ಸೆಕೆಂಡ್‌ಗಳಿಗೆ ಒಬ್ಬ ವ್ಯಕ್ತಿ ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಒಟ್ಟಾರೆಯಾಗಿ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷರಾದ ಶಾರದಾ ಆರ್ ಪಾನಘಂಟಿ ಮಾತನಾಡಿ, ಸಂವಿಧಾನ ಪ್ರತಿಯೊಬ್ಬರಿಗೂ ಗೌರವ, ಸ್ವಾಭಿಮಾನದಿಂದ ಬದುಕುವ ಹಕ್ಕು ನೀಡಿದೆ. ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವಿಸಬೇಕು, ಬೆಂಬಲಿಸಬೇಕು ಎಂದರು.
ಶಿಬಿರದಲ್ಲಿ ಕೂಪ್ಪಳ, ಭಾಗ್ಯನಗರದ ನಾಗರಿಕರು ಹಾಗೂ ವಿಶೇಷವಾಗಿ ಲಿಂಗತ್ವ ಅಲ್ಪಸಂಖ್ಯಾತರು, ಇನ್ನರ್‌ವ್ಹೀಲ್ ಕ್ಲಬ್ ಕಾರ್ಯದರ್ಶಿಗಳಾದ ಸುವರ್ಣ ಘಂಟಿ, ಸದಸ್ಯರು ಇತರರು ಭಾಗವಹಿಸಿದ್ದರು.
Comments are closed.