ಜೂ. 12ರಿಂದ 16ರವರೆಗೆ ಭಾಗ್ಯನಗರದಲ್ಲಿ ವಿದ್ಯುತ್ ವ್ಯತ್ಯಯ

ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 05ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Get real time updates directly on you device, subscribe now.

 
ಕೊಪ್ಪಳ  : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ವ್ಯಾಪ್ತಿಯ ಭಾಗ್ಯನಗರ ಫೀಡರ್‌ನಲ್ಲಿ ನಿರ್ವಹಣೆ ಕೆಲಸ, ತಾಂಬ್ರದ ತಂತಿಗಳನ್ನು ಕಳಚಿ ಹೊಸ ತಂತಿಗಳನನು ಬದಲಾಯಿಸುವ ಹಾಗೂ ಲೈನ್ಸ್ ನಿರ್ವಹಣೆ ಕೆಲಸ ನಡೆಯುವ ಪ್ರಯುಕ್ತ ಭಾಗ್ಯನಗರದ ವಿವಿಧೆಡೆ ಜೂನ್ 12ರಿಂದ ಜೂ.16ರವರೆಗೆ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯ ದಿನದಂದು ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯರಸ್ತೆ, ಅಂಬೇಡ್ಕರ್ ವೃತ್ತ ಹಾಗೂ ಹತ್ತಿರದ ಎಲ್ಲಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು. ವಿದ್ಯುತ್ ನಿರ್ವಹಣಾ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಸೂಚಿಸಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!