ಬಾಲ್ಯ ವಿವಾಹ ಮುಕ್ತ ತಾಲ್ಲೂಕಾಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ : ಶೇಖರಗೌಡ ಜಿ. ರಾಮತ್ನಾಳ

Get real time updates directly on you device, subscribe now.

ಬಾಲ್ಯವಿವಾಹ ಮುಕ್ತ ತಾಲೂಕನ್ನಾಗಿಸಲು ತಾಲೂಕಿನ ಎಲ್ಲಾ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು  ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಹೇಳಿದರು.
ಶುಕ್ರವಾರದಂದು ಯಲಬುರ್ಗಾ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಯಲಬುರ್ಗಾ ತಾಲ್ಲೂಕಿನ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳೊಂದಿಗಿನ ತಾಲ್ಲೂಕು ಮಟ್ಟದ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನ ಎಲ್ಲಾ ದೇವಾಲಯಗಳಲ್ಲಿ ಮುಖ್ಯವಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಶಾಶ್ವತ ಗೋಡೆ ಬರಹವನ್ನು ಬರೆಯಿಸಲು ದೇವಸ್ಥಾನಗಳ ಮುಖ್ಯಸ್ಥರಿಗೆ ಸೂಚನೆ ನೀಡಿ. ಸಾಮೂಹಿಕ ವಿವಾಹ ಆಯೋಜಕರು ಶಾಶ್ವತ ಗೋಡೆ ಬರಹವನ್ನು ಬರೆಯಿಸುವುದನ್ನು ಸಹ ಒಂದು ಕಡ್ಡಾಯ ಅಂಶವಾಗಿ ಪರಿಗಣಿಸಬೇಕು. ಸಾಮೂಹಿಕ ವಿವಾಹ ಆಯೋಜಕರು ನೋಂದಣಿೆಯನ್ನು ಮಾಡಿಸುವುದು ಕಡ್ಡಾಯವಾಗಿದ್ದು, ನೋಂದಣಿ ಮಾಡಿಸಿರುವ ಸಮಿತಿ/ಸಂಸ್ಥೆಗಳಿಗೆ ಮಾತ್ರವೇ ಸಾಮೂಹಿಕ ವಿವಾಹ ಆಯೋಜನೆಗೆ ಅನುಮತಿಸಬೇಕು. ನೋಂದಣಿಯಾಗದಿರುವ ಸಮಿತಿ/ಸಂಸ್ಥೆಗಳಿಗೆ ಸಾಮೂಹಿಕ ವಿವಾಹ ಆಯೋಜನೆಗೆ ಅನುಮತಿಯನ್ನು ನೀಡಬಾರದು. ಸಾಮೂಹಿಕ ವಿವಾಹ ಆಯೋಜಕರು ಕಡ್ಡಾಯವಾಗಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಸಾಮೂಹಿಕ ವಿವಾಹ ಆಯೋಜನೆಗೆ ಅನುಮತಿಯನ್ನು ಪಡೆದುಕೊಂಡ ನಂತರವೇ ಸಾಮೂಹಿಕ ವಿವಾಹಗಳನ್ನು ಆಯೋಜಿಸತಕ್ಕದ್ದು, ತಪ್ಪಿದಲ್ಲಿ, ಬಾಲ್ಯವಿವಾಹ ಜರುಗಿದ್ದು ಕಂಡುಬAದಲ್ಲಿ, ಸಾಮೂಹಿಕ ವಿವಾಹ ಆಯೋಜಕರನ್ನು ಸೇರಿದಂತೆ ಸಂಬAಧಿಸಿದವರ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಸೂಚಿಸಿದರು.
ವಿವಾಹದ ಸಲುವಾಗಿ  ಯಾರಾದರು ನಕಲಿ ಶಾಲಾ ದೃಢೀಕರಣ ಪತ್ರವನ್ನು ನೀಡಿದಲ್ಲಿ ಅಂತಹ ಶಾಲೆ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಶಿಕ್ಷಣ ಇಲಾಖೆ ಕಾನೂನು ರೀತ್ಯಾ ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಮೇಲಾಗುವ ಯಾವುದೇ ರೀತಿಯ ಅಪರಾಧಗಳನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಸರಕಾರವು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರಡಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಗಾಗಿ ರೂಪಿಸಲಾಗಿರುವ ಕಾರ್ಯನಿರ್ವಹಣಾ ಮಾರ್ಗಸೂಚಿಗಳು ಮತ್ತು ಕಾರ್ಯವಿಧಾನಗಳನ್ನು ಜಾರಿಗೊಳಿಸಿದ್ದು, ದಿನಾಂಕ:03.04.2016ರಿAದ ನೀತಿಯು ಅನುಷ್ಠಾನದಲ್ಲಿದ್ದು, ನೀತಿಯ ಮಾರ್ಗಸೂಚಿಗಳನ್ನು ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಕಾನೂನು ರೀತ್ಯಾ ಸೂಕ್ತ ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಲು  ಹಾಗೂ ಶಾಲಾ ಮಕ್ಕಳಿಗೆ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು  ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರಡಿಯಲ್ಲಿ ಬಾಲಭಿಕ್ಷಾಟನೆ ಶಿಕ್ಷಾರ್ಹ ಅಪರಾಧವಾಗಿದೆ. ತಾಲೂಕಿನಲ್ಲಿ ಬಾಲ ಭಿಕ್ಷಾಟನೆ ಪಿಡುಗು ಇದ್ದು, ಸಮಾಜ ಕಲ್ಯಾಣ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಅನಿರೀಕ್ಷಿತ ದಾಳಿಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಬಾಲ ಮತ್ತು ಕಿಶೋರ ಕಾರ್ಮಿಕರ ಪತ್ತೆಗಾಗಿ ನಿಯಮಿತವಾಗಿ ಅನಿರೀಕ್ಷಿತ ದಾಳಿಗಳನ್ನು ಆಯೋಜಿಸುವುದು, ಪತ್ತೆಯಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಪೋಷಣೆ ಮತ್ತು ರಕ್ಷಣೆಗೆ ಹಾಜರಪಡಿಸುವುದು ಕಡ್ಡಾಯವೆಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕಿನ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಗರ್ಭಿಣಿಯಾಗಿರುವುದು ತಿಳಿದುಬಂದಿದ್ದು, ಅಪ್ರಾಪ್ತ ವಯಸ್ಸಿನ ಮಕ್ಕಳು ಗರ್ಭಿಣಿಯಾಗುವುದಕ್ಕೆ ಕಾರಣರಾದವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012 ರಡಿಯಲ್ಲಿ ಕಡ್ಡಾಯವಾಗಿ ಪ್ರಕರಣವನ್ನು ದಾಖಲಿಸಬೇಕು. ಈ ಬಗ್ಗೆ ಕಾಯ್ದೆಯ ಕಲಂ 19ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಈ ಕುರಿತು ಪ್ರಕರಣವನ್ನು ದಾಖಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಮತ್ತು ಮಕ್ಕಳ ಪರವಾದ ಪಂಚಾಯತ್‌ಗಳನ್ನಾಗಿಸಲು ಪ್ರತಿ ಗ್ರಾಮ ಪಂಚಾಯತ್‌ಗಳಲ್ಲಿ ಕನಿಷ್ಠ 03 ತಿಂಗಳಿಗೊಮ್ಮೆ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಗಳ ಸಭೆಯನ್ನು ಮತ್ತು ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಕಡ್ಡಾಯವಾಗಿ ಆಯೋಜಿಸುವಂತೆ ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆ ಮತ್ತು ಅಂಗನವಾಡಿಗಳ ಆವರಣದಲ್ಲಿ ವಿದ್ಯುತ್ ಕಂಬಗಳು ಇದ್ದಲ್ಲಿ, ಅವುಗಳನ್ನು ಸ್ಥಳಾಂತರಿಸಲು ಕೆ.ಇ.ಬಿ ಅಧಿಕಾರಿಗಳಿಗೆ ತಿಳಿಸುತ್ತಾ, ಈ ವಿಷಯ ಕುರಿತು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿಯನ್ನು ನೀಡುವಂತೆ ತಿಳಿಸಿದರು.
ಸಭೆಯಲ್ಲ್ಲಿ ಯಲಬುರ್ಗಾ ತಹಶೀಲ್ದಾರ ಬಸವರಾಜ್ ತನ್ನಳ್ಳಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ, ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದಪ್ಪ ಮಾಳೇಕೊಪ್ಪ, ತಾಲೂಕು ವೈದ್ಯಾಧಿಕಾರಿ ಡಾ. ರಚನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಶಂಕರ್ ಕರಡಕಲ್, ವಿಸ್ತರಣಾಧಿಕಾರಿ ವಿ.ಕೆ. ಬಡಿಗೇರ, ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ತಳವಾರ,  ಮುಂತಾದ ಅಧಿಕಾರಿಗಳು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!