38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಸಿಎಂ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು.
ಸಮ್ಮೇಳನದ ಉದ್ಘಾಟನೆ ಪೆ.3ರಂದು ಬೆಳಿಗ್ಗೆ ನಡೆಯಲಿದ್ದು, ಅದರ ಉದ್ಘಾಟನೆಯನ್ನು ತಾವು ನೆರವೇರಿಸಿಕೊಡಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಹ್ವಾನಿಸಿದರು. ತಾವು ಸಮ್ಮೇಳನಕ್ಕೆ ಬರುವುದಾಗಿ ಸಮ್ಮತಿ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದರು.
ಮೈಸೂರು ಪತ್ರಿಕಾ ಭವನಕ್ಕೆ ಡಿ.22ರಂದು ಶಂಕುಸ್ಥಾಪನೆ
ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ.22ರಂದು ಶಂಕುಸ್ಥಾಪನಾ ಕಾರ್ಯಕ್ರಮಕ್ಕೂ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿದ್ದರು.
Comments are closed.