ಡಾ.ಸಿದ್ಧಯ್ಯ ಪುರಾಣಿಕ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆಗಾಗಿ ಪ್ರಸ್ತಾವನೆ ಸಲ್ಲಿಕೆ: ಡಿ.21ರಂದು ಸಭೆ

Get real time updates directly on you device, subscribe now.

: ಡಾ.ಸಿದ್ದಯ್ಯ ಪುರಾಣಿಕ ಅವರ ಅನುಪಮ ಸೇವೆಯನ್ನು ಸ್ಮರಿಸಿ ಅವರ ಹೆಸರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಟ್ರಸ್ಟನ್ನು ಸ್ಥಾಪಿಸಲು ಸರ್ಕಾರದಿಂದ ಅನುಮೋದನೆ ಪಡೆಯಬೇಕಾಗಿರುವುದರಿಂದ ಬೈಲಾ ಸೇರಿದಂತೆ, ಟ್ರಸ್ಟ್ನ ಸ್ಥಾಪನೆಗೆ ಸಂಬAಧಿಸಿದ ಸಂಪೂರ್ಣ ವಿವರಗಳನ್ನೊಳಗೊಂಡ ಪ್ರಸ್ತಾವನೆಯನ್ನು ಸಲ್ಲಿಸುವ ಕುರಿತಂತೆ ಡಿಸೆಂಬರ್ 21ರ ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದೆ.
ಈ ಸಭೆಯಲ್ಲಿ ಜಿಲ್ಲೆಯ ಸಾಹಿತಿಗಳು-ಕಲಾವಿದರು, ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟಕರು ಹಾಗೂ ಸಂಘ-ಸAಸ್ಥೆಯ ಪದಾಧಿಕಾರಿಗಳು ಭಾಗವಹಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮಾರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಟ್ರಸ್ಟ್ ರಚನೆಯ ಸಂಬAಧ 2023-24ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ರಿಯಾಯೋಜನೆಯಲ್ಲಿ 10 ಲಕ್ಷಗಳ ರೂ.ಅನುದಾನವನ್ನು ಡಾ.ಸಿದ್ದಯ್ಯ ಪುರಾಣಿಕ ಟ್ರಸ್ಟ್ ರಚನೆಗಾಗಿ ಕಾಯ್ದಿರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!